ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಬಾಬು ಅರೆಸ್ಟ್

0

ಬೆಂಗಳೂರು : ಪ್ಲ್ಯಾಟ್ ನಲ್ಲಿ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಖರೀದಿ ಮಾಡಿರುವ ಆರೋಪದ ಹಿನ್ನೆಲೆಯಲ್ಲೀಗ ಅಟ್ಟಿಕಾ ಗೋಲ್ಡ್ ಕಂಪೆನಿಯ ಮಾಲೀಕ ಬೊಮ್ಮನಹಳ್ಳಿ ಬಾಬುವನ್ನು ಪೊಲೀಸರು ಬಂಧಿಸಿದ್ದಾರೆ.

ಗೋಲ್ಡ್ ಖರೀದಿ ಕಂಪೆನಿಗಳಲ್ಲಿ ಕಳವು ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡಲಾಗುತ್ತಿದೆ ಅನ್ನೋ ಆರೋಪ ಹಲವು ಸಮಯಗಳಿಂದಲೂ ಕೇಳಿಬರುತ್ತಿದೆ. ಇದೀಗ ಇಂತಹ ಆರೋಪಕ್ಕೆ ಪುಷ್ಟಿ ನೀಡುವ ಘಟನೆಯೊಂದು ನಡೆದಿದೆ.

ಪ್ಲ್ಯಾಟ್ ವೊಂದರಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಬೇಧಿಸಿದ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಕಳ್ಳನನ್ನು ವಿಚಾರಣೆ ಮಾಡಿದ್ದಾರೆ.

ಈ ವೇಳೆಯಲ್ಲಿ ತಾನು ಕದ್ದಿದ್ದ ಸುಮಾರು 15 ಲಕ್ಷ ರೂಪಾಯಿ ಮಾಲನ್ನು ತಾನು ಅಟ್ಟಿಕಾ ಗೋಲ್ಡ್ ಕಂಪೆನಿಯಲ್ಲಿ ಮಾರಾಟ ಮಾಡಿದ್ದಾಗಿ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಟ್ಟಿಕಾ ಬಾಬುವನ್ನು ವಿಚಾರಣೆಗೆ ಆತನ ಮನೆಗೆ ತೆರಳಿದ್ದಾರೆ.

ಈ ವೇಳೆಯಲ್ಲಿ ಬಾಬು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಇದರಿಂದಾಗಿ ಬಾಬುವನ್ನು ಬಂಧಿಸಲಾಗಿದೆ ಎಂದು ಸಿಪಿಐ ಸತ್ಯನಾರಾಯಣ ಅವರು ತಿಳಿಸಿದ್ದಾರೆ.

Leave A Reply

Your email address will not be published.