Auto driver murder: ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆಗೈದ ಪ್ರಯಾಣಿಕರು

ನವದೆಹಲಿ: (Auto driver murder) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಆಟೋ ಚಾಲಕನನ್ನು ಇರಿದು ಕೊಂದ ಘಟನೆ ದೆಹಲಿಯ ದ್ವಾರಕಾ ಸೆಕ್ಟರ್ 13 ರಲ್ಲಿ ನಡೆದಿದೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದು, ಮಾರ್ಗ ಮಧ್ಯೆ ಆಟೋ ಚಾಲಕ ಮೃತಪಟ್ಟಿದ್ದಾನೆ.

ದ್ವಾರಕಾ ಸೆಕ್ಟರ್ 13 ರಲ್ಲಿ ನಡೆದ ಚೂರಿ ಇರಿತದ ಘಟನೆಯ ಬಗ್ಗೆ ಮಧ್ಯರಾತ್ರಿ 2 ಗಂಟೆಗೆ ಪೊಲೀಸರಿಗೆ ಪಿಸಿಆರ್ ಕರೆ ಬಂದಿದ್ದು, ಅಧಿಕಾರಿಗಳ ತಂಡವನ್ನು ತಕ್ಷಣವೇ ಅಪರಾಧ ಸ್ಥಳಕ್ಕೆ ಕಳುಹಿಸಲಾಗಿತ್ತು. ಸ್ಥಳಕ್ಕೆ ಪೊಲೀಸರು ತೆರಳುವ ವೇಳೆಯಲ್ಲಿ ಇಬ್ಬರು ಆಟೋ ಚಾಲಕನ ಕುತ್ತಿಗೆಗೆ ಇರಿಯುತ್ತಿದ್ದು, ಪೊಲೀಸರನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವ್ಯಕ್ತಿಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಆಟೋ ಚಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆಯ ಕುಯರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಈ ವೇಳೆ ಮೃತನಿಗೆ ಆತನ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ ಎಂಬುದು ತಿಳಿದುಬಂದಿದೆ. ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಯಾವ ಕಾರಣಕ್ಕೆ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಕುರಿತು ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ದ್ವಾರಕಾ ಉತ್ತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಜೊತೆಗೆ ಕೊಲೆಗೆ ನಿಖರವಾದ ಕಾರಣಗಳೇನು ಎಂಬುದರ ಬಗ್ಗೆ ತನಿಖೆ ನಡೆಸಲು ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Murder for electricity bill: 3,000 ವಿದ್ಯುತ್ ಬಿಲ್ ಪಾವತಿಸದಿದ್ದಕ್ಕೆ ವ್ಯಕ್ತಿಯ ಕೊಲೆ

ಇದನ್ನೂ ಓದಿ : Drunk and Drive: ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಟೆಂಪೋ ಚಲಾಯಿಸಿದ ಚಾಲಕ: ಬೈಕ್ ಸವಾರನಿಂದ ಕಪಾಳಮೋಕ್ಷ

ಇದನ್ನೂ ಓದಿ : Husband surrendered to the police: ‘ನಾನು ನನ್ನ ಹೆಂಡತಿಯನ್ನು ಕೊಂದಿದ್ದೇನೆ’: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

Auto driver murder: Passengers stabbed to death by auto driver

Comments are closed.