Balochistan Bus accident: ಕಂದಕಕ್ಕೆ ಉರುಳಿದ‌ ಪ್ರಯಾಣಿಕರ ಬಸ್‌ : 39 ಸಾವು

ಬಲೂಚಿಸ್ತಾನ: (Balochistan Bus accident) ಪ್ರಯಾಣಿಕರ ಬಸ್ ಕಂದರಕ್ಕೆ ಬಿದ್ದು ಕನಿಷ್ಠ 39 ಜನರು ಸಾವನ್ನಪ್ಪಿರುವ ಘಟನೆ ಭಾನುವಾರ ಬಲೂಚಿಸ್ತಾನದ ಲಾಸ್ಬೆಲಾ ಪ್ರದೇಶದಲ್ಲಿ ನಡೆದಿದೆ. ಯು ಟರ್ನ್‌ ತೆಗೆದುಕೊಳ್ಳುವ ವೇಳೆ ಬಸ್‌ ಕಂದಕಕ್ಕೆ ಉರುಳಿದ್ದು, ಬೆಂಕಿ ಹೊತ್ತಿಕೊಂಡಿದೆ.

48 ಪ್ರಯಾಣಿಕರಿದ್ದ ಬಸ್‌ ಪಾಕಿಸ್ತಾನದ ಕ್ವೆಟ್ಟಾದಿಂದ ಕರಾಚಿಗೆ ಪ್ರಯಾಣಿಸುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, 48 ಪ್ರಯಾಣಿಕರಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿವೆ. ಲಾಸ್ಬೆಲಾ ಬಳಿ ಯು-ಟರ್ನ್ ತೆಗೆದುಕೊಳ್ಳುವಾಗ ಸೇತುವೆಯ ಪಿಲ್ಲರ್‌ಗೆ ಡಿಕ್ಕಿ ಹೊಡೆದು ಬಸ್‌ ಕಂದಕಕ್ಕೆ ಉರುಳಿ ಬಿದ್ದಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 39 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೂ ಹಲವರು ಗಾಯಗೊಂಡಿದ್ದಾರೆ. ಆದರೆ ಸಾವಿನ ಕುರಿತು ನಿಖರವಾದ ಮಾಹಿತಿಗಳು ತಿಳಿದುಬಂದಿಲ್ಲ.

“ವೇಗದ ಚಾಲನೆಯಿಂದಾಗಿ, ಲಾಸ್ಬೆಲಾ ಬಳಿ ಯು-ಟರ್ನ್ ತೆಗೆದುಕೊಳ್ಳುವಾಗ ಬಸ್‌ ಸೇತುವೆಯ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಕಂದರಕ್ಕೆ ಉರುಳಿ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿತು.” ಎಂದು ಲಾಸ್ಬೆಲಾ ಸಹಾಯಕ ಕಮಿಷನರ್ ಹಮ್ಜಾ ಅಂಜುಮ್ ಡಾನ್ ವರದಿಯಲ್ಲಿ ಉಲ್ಲೇಖಿಸಿದ್ದಾರೆ. “ಮೃತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಯನ್ನು ಮಾಡಲಾಗುವುದು, ಗಾಯಗೊಂಡ ಪ್ರಯಾಣಿಕರನ್ನು ಲಾಸ್ಬೆಲಾದ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ” ಎಂದು ಹಮ್ಜಾ ಅಂಜುಮ್ ಜಿಯೋ ಟಿವಿಗೆ ತಿಳಿಸಿದರು.

ಇದುವರೆಗೆ ಮಗು ಮತ್ತು ಮಹಿಳೆ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಮೃತರ ಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಇದುವರೆಗೆ ಅಪಘಾತದ ಸ್ಥಳದಿಂದ 17 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ : 5 year girl died: ಕಬ್ಬಿಣದ ಗೇಟ್‌ ಬಿದ್ದು 5 ವರ್ಷದ ಬಾಲಕಿ ಸಾವು

ಇದನ್ನೂ ಓದಿ : Peru bus accident: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತ: 25 ಮಂದಿ ಸಾವು

ವರದಿಗಳ ಪ್ರಕಾರ, ಬಸ್ ಚಾಲಕನ ಅತಿವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಆಡಳಿತಾಧಿಕಾರಿಗಳ ತಂಡಗಳು ಅಪಘಾತದ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

Balochistan Bus accident: Passenger bus fell into ditch: 39 killed

Comments are closed.