ಮಂಗಳವಾರ, ಏಪ್ರಿಲ್ 29, 2025
HomeCrimeBangalore Crime : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಶಾಲಾ ಮುಖ್ಯ ಶಿಕ್ಷಕನ ಬಂಧನ

Bangalore Crime : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಶಾಲಾ ಮುಖ್ಯ ಶಿಕ್ಷಕನ ಬಂಧನ

- Advertisement -

ಬೆಂಗಳೂರು : ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಶಾಲಾ ಮುಖ್ಯ ಶಿಕ್ಷಕ ಅತ್ಯಾಚಾರ (Bangalore Crime) ಎಸಗಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ

ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : Araga Jnanendra : ಮಲ್ಲಿಕಾರ್ಜುನ ಖರ್ಗೆ ವಿರುದ್ದ ಆಕ್ಷೇಪಾರ್ಹ ಹೇಳಿಕೆ : ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಎಫ್‌ಐಆರ್‌

ಇದನ್ನೂ ಓದಿ : Jammu & Kashmir Crime : ಭಯೋತ್ಪಾದನೆ ನಿಧಿ ಪ್ರಕರಣ : ಪುಲ್ವಾಮಾದಲ್ಲಿ ಎನ್‌ಐಎ ದಾಳಿ

ನಿನ್ನೆ (ಆಗಸ್ಟ್ 03) 10 ವರ್ಷದ ಬಾಲಕಿ ಎಂದಿನಂತೆ ಶಾಲೆಗೆ ಹೋಗಿದ್ದಳು. ಬಾಲಕಿ ಶಾಲೆಗೆ ಬರುತ್ತಿದ್ದುದನ್ನು ಕಂಡ ಪ್ರಾಂಶುಪಾಲರು ಆಕೆಯನ್ನು ಖಾಲಿ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಪೋಷಕರು ಮನೆಗೆ ಬಂದು ನೋಡಿದಾಗ ಮಗಳು ನೋವಿನಿಂದ ನರಳುತ್ತಿದ್ದುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Bangalore Crime: Rape of a minor student: School head teacher arrested

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular