Bangalore Murder Case : ರುಂಡ ಕೈಕಾಲು ಕತ್ತರಿಸಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು : ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ವಿಚಿತ್ರ ಕೊಲೆ ಪ್ರಕರಣಗಳು (Bangalore Murder Case) ಬೆಳಕಿಗೆ ಬರುತ್ತಿದೆ. ಇದೀಗ ರಾಜ್ಯದ ರಾಜಧಾನಿಯಲ್ಲಿ ಕೈ ಕಾಲುಗಳು ಹಾಗೂ ರುಂಡವಿಲ್ಲದ 52 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ತರಹದ ವಿಕೃತಿ ದೃಶ್ಯವನ್ನು ಕಂಡ ಜನರು ಬೆಚ್ಚಿಬಿದ್ದಿದ್ದಾರೆ.

ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟದಲ್ಲಿ ಈ ಕೃತ್ಯ ನಡೆದಿದ್ದು, ಕೊಲೆಗಟುಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸದ್ಯ ಮೃತ ಪಟ್ಟ ಸಂತ್ರಸ್ತೆ ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮೃತಪಟ್ಟ ಮಹಿಳೆ ಸಾಫ್ಟ್ವೇರ್‌ ಕಂಪನಿಯೊಂದರಲ್ಲಿ ಹೌಸ್‌ಕೀಪಿಂಗ್‌ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರು ವರ್ಷಗಳ ಹಿಂದೆ ಪತಿ ತೀರಿಕೊಂಡ ನಂತರ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾದ ನಂತರ ಗೀತಾ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಳೆದ ನಾಲ್ಕು ದಿನಗಳಿಂದ ಗೀತಾ ಅವರ ಮಗಳು ಫೋನ್‌ ಮಾಡುತ್ತಿದ್ದು, ಉತ್ತರಿಸದಿರುವುದನ್ನು ಮನಗಂಡು ತಾಯಿ ಮನೆಗೆ ನೋಡಲು ಬಂದಿದ್ದಾರೆ. ಆದರೆ ಮನೆಗೆ ಬೀಗ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಗುರುವಾರ ಬೆಳಗ್ಗೆ ಆಕೆಯ ಮನೆಯ ಮುಂದಿನ ಕಾಂಪೌಂಡ್‌ ಬಳಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು, ಕೊಳೆತ ರುಂಡವಿಲ್ಲದ ಶವ ಕಂಡು ಬೆಚ್ಚಿಬಿದ್ದಿದ್ದು, ತಕ್ಷಣವೇ ಹತ್ತಿರದ ಪೊಲೀಸ್‌ರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : Jammu and Kashmir Crime : ಜಮ್ಮು ಮತ್ತು ಕಾಶ್ಮೀರ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ದಾಳಿ

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೂರು ನಾಲ್ಕು ದಿನಗಳ ಹಿಂದೆ ಮನೆ ಖಾಲಿ ಮಾಡಿದ ಪಕ್ಕದ ಮನೆಯಲ್ಲಿ ವಾಸವಿದ್ದ ಮೂವರು ಯುವಕರ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಪ್ರಾಥಮುಕ ತನಿಖೆಯಲ್ಲಿ ಮೇ 28 ಅಥವಾ 29 ರಂದು ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಾವು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಗಾರ್ಮೆಂಟ್ಸ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರದ ಮೂವರು ಯುವಕರ ಪಾತ್ರದ ಬಗ್ಗೆ ಬಲವಾಗಿ ಶಂಕಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Bangalore Murder Case: Brutal killing of a woman by amputating her hands and feet

Comments are closed.