Bangalore underpass case : ಬೆಂಗಳೂರು ಅಂಡರ್‌ ಪಾಸ್‌ನಲ್ಲಿ ಯುವತಿ ಸಾವು : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಬೆಂಗಳೂರು : ಇತ್ತೀಚೆಗೆ ಸುರಿದ ಭಾರೀ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿತ್ತು. ಅದ್ರಲ್ಲೂ ಬೆಂಗಳೂರಿನ ಕೆಆರ್‌ ಸರ್ಕಲ್‌ ಅಂಡರ್‌ ಪಾಸ್‌ನಲ್ಲಿ (Bangalore underpass case) ನೀರು ತುಂಬಿ ಕ್ಯಾಬ್‌ ಮುಳುಗಿ ಕ್ಯಾಬ್‌ನಲ್ಲಿದ್ದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿಯೋರ್ವಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದಾರೆ. ಅಲ್ಲದೇ ಸಮಗ್ರ ತನಿಖೆಯನ್ನು ನಡೆಸಿ ವರದಿಯನ್ನು ನೀಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ಲೋಕಾಯಕ್ತರು ನಿರ್ದೇಶನ ನೀಡಿದ್ದಾರೆ.

ಈ ಮಳೆಯಿಂದಾಗ ಅವಾಂತರಕ್ಕೆ ಕುರಿತಂತೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌ ಪಾಟೀಲ್‌, ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಮೇ 21 ರಂದು ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೆ.ಆರ್‌ ಸರ್ಕಲ್‌ ಅಂಡರ್‌ ಪಾಸ್‌ನಲ್ಲಿ ಕ್ಯಾಬ್‌ ಮುಳುಗಿದ ಪರಿಣಾಮ ಇನ್ಫೋಸಿಸ್‌ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದರು.

ಇದನ್ನೂ ಓದಿ : Crime News : ಹಳೆ ದ್ವೇಷ ಚಾಕುನಿಂದ ಇರಿದು ಯುವಕನ ಹತ್ಯೆ

ಇದನ್ನೂ ಓದಿ : Crime News : ಹಳೆ ದ್ವೇಷ ಚಾಕುನಿಂದ ಇರಿದು ಯುವಕನ ಹತ್ಯೆ

ಅದರಂತೆ ಈ ಸನ್ನಿವೇಶವನ್ನು ಗಂಭೀರವಾಗಿ ಪರಿಗಣಿಸಿ ದೂರು ದಾಖಲಿಸಿಕೊಂಡು ಜೂನ್‌ 5 ರೊಳಗೆ ಉತ್ತರ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌ ಪಾಟೀಲ್‌ ನೋಟಿಸ್‌ ಜಾರಿಗೊಳಿಸಿದ್ದಾರೆ. ಬಿಬಿಎಂಪಿ ಮುಖ್ಯಾಯುಕ್ತರು, ಉತ್ತರ ವಲಯ ಆಯುಕ್ತರು, ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌, ಸಂಪಂಗಿ ರಾಮನಗರ ವಾರ್ಡ್ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ಸಹಾಯಕ ಇಂಜಿನಿಯರ್‌, ಬಿಬಿಎಂಪಿ ಮಳೆ ನೀರು ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಮತ್ತು ಸಹಾಯಕ ಇಂಜಿನಿಯರ್‌ ಅವರನ್ನು ಪ್ರಕರಣಗಳಲ್ಲಿ ಪ್ರತಿವಾದಿಗಳೆಂದು ಹೆಸರಿಸಲಾಗಿದೆ.

Bangalore underpass case: Death of young woman in Bangalore underpass: Lokayukta filed a voluntary case

Comments are closed.