Bengaluru Family Suicide : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Bengaluru Family Suicide) ಶರಣಾಗಿರುವ ಕುತೂಹಲಕಾರಿ ಘಟನೆಯೊಂದು ಇಂದು ಬೆಳಕಿಗೆ ಬಂದಿದೆ. ಪತ್ನಿ ಹಾಗೂ ಮಕ್ಕಳನ್ನು ಕೊಂದು, ನಂತರ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ, ಮೃತಪಟ್ಟವರು ವಿಜಯ್(31), ಹೇಮಾವತಿ (29) ಹಾಗೂ ಇಬ್ಬರು ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆಯೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ : Crime News‌ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಮೂವರ ಬಂಧನ

ಸದ್ಯ ಮನೆಯಲ್ಲಿ ಇರುವ ನಾಲ್ವರು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿರುತ್ತದೆ. ಈ ಘಟನೆ ಬಗ್ಗೆ ವಿಷಯ ತಿಳಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

Bengaluru Family Suicide: Couple committed suicide with 2 children

Comments are closed.