associate professor exam leak issue : ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿ ಬಂಧನ

ಬೆಂಗಳೂರು : associate professor exam leak issue :ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ವಿಚಾರ ಬೆಳಕಿಗೆ ಬಂದಿರುವ ಬೆನ್ನಲ್ಲೇ ಈಗ ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್​ ಸೋರಿಕೆಯಾದ ಪ್ರಕರಣ ಕೂಡ ಸುದ್ದಿಯಲ್ಲಿದೆ .ಈ ಪ್ರಕರಣದ ಸಂಬಂಧ ಬೆಂಗಳೂರಿನ ಮಲ್ಲೇಶ್ವರಂ ಠಾಣಾ ಪೊಲೀಸರು ಆರೋಪಿ ಸೌಮ್ಯರನ್ನು ಬಂಧಿಸಿದ್ದಾರೆ. ನಿನ್ನೆ ಸರ್ಕಾರಿ ರಜೆ ಇದ್ದ ಕಾರಣ ನ್ಯಾಯಾಂಗ ಬಂಧನದಲ್ಲಿ ಇರಿಸಿದ್ದ ಪೊಲೀಸರು ಇಂದು ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸೌಮ್ಯ ಮಾರ್ಚ್​ ತಿಂಗಳಲ್ಲಿ ನಡೆದಿದ್ದ ಮೈಸೂರಿನ ಕುವೆಂಪು ನಗರದ ಪಿಯುಸಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆ ಆರಂಭಕ್ಕೆ ಇನ್ನೂ ಒಂದು ಗಂಟೆ ಬಾಕಿ ಇರುವಾಗಲೇ ಗೆಳತಿಗೆ 18 ಪ್ರಶ್ನೆಗಳನ್ನು ವಾಟ್ಸಾಪ್​ ಮೂಲಕ ಕಳುಹಿಸಿದ್ದರು. ಆ ಗೆಳತಿಯು ಬೆಂಗಳೂರಿನ ರಾಮಕೃಷ್ಣ ಎಂಬವರಿಗೆ ಮಾಹಿತಿ ಹಂಚಿಕೊಂಡಿದ್ದಳು. ಇದೇ ವಿಚಾರವಾಗಿ ಈಕೆಯನ್ನು ಬಂಧಿಸಿರುವ ಬೆಂಗಳೂರಿನ ಮಲ್ಲೇಶ್ವರಂ ಠಾಣಾ ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ . ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ 32ನೇ ಎಸಿಎಂಎಂ ಕೋರ್ಟ್​ಗೆ ಮನವಿ ಮಾಡಲಿದ್ದಾರೆ.


ಮೈಸೂರು ವಿವಿಯಲ್ಲಿ ಎಂಎಸ್ಸಿ ಪದವಿ ಪಡೆದಿರುವ ಆರೋಪಿ ಸೌಮ್ಯ ಪಿಹೆಚ್​ಡಿ ಪದವಿಧರೆ ಕೂಡ ಹೌದು.ಇವರು ಮೈಸೂರು ವಿವಿಯಲ್ಲಿ ಭೂಗೋಳ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

PSI exam postponed : ತನಿಖೆ ಪೂರ್ಣಗೊಳ್ಳುವವರೆಗೂ ಪಿಎಸ್​ಐ ಪರೀಕ್ಷೆ ನಡೆಯುವುದಿಲ್ಲ : ಪ್ರವೀಣ್​ ಸೂದ್​

ಬೆಂಗಳೂರು : PSI exam postponed : ರಾಜ್ಯದಲ್ಲಿ ಪಿಎಸ್​ಐ ನೇಮಕಾತಿ ಅಕ್ರಮ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸಿಐಡಿ ಅಧಿಕಾರಿಗಳು ಈ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪಿಎಸ್​ಐ ಅಕ್ರಮ ಪ್ರಕರಣದ ಕಿಂಗ್​ ಪಿನ್​ ಎನ್ನಲಾದ ರುದ್ರೇಶ್​ ಗೌಡನನ್ನು ಇಂದು ಮಹಾರಾಷ್ಟ್ರದ ಸೊಲ್ಹಾಪುರದಲ್ಲಿ ಬಂಧಿಸಲಾಗಿದೆ. ನಿನ್ನೆಯಷ್ಟೇ ಪೊಲೀಸರು ಕಲಬುರಗಿಯ ಅಫಜಲಪುರದಲ್ಲಿ ರುದ್ರೇಶ್​ ಗೌಡ ಸಹೋದರ ಮಹಂತೇಶ್​ ಗೌಡನನ್ನು ಬಂಧಿಸಿದ್ದರು.

545 ಪಿಎಸ್​ಐ ನೇಮಕಾತಿ ಹುದ್ದೆಯಲ್ಲಿ ಅಕ್ರಮ ನಡೆದಿರುವ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ 405 ಪಿಎಸ್​ಐ ಹುದ್ದೆಗಳಿಗೆ ಪರೀಕ್ಷೆ ನಡೆಯುವ ಮುನ್ನವೇ ಅಕ್ರಮ ನೇಮಕಾತಿಗೆ ಪ್ಲಾನ್​ ಮಾಡಿದ್ದ ಆಡಿಯೋವನ್ನು ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ರಿಲೀಸ್​ ಮಾಡಿದ್ದು ಮತ್ತೊಂದು ಅಕ್ರಮದ ವಾಸನೆ ಹೊಗೆಯಾಡುತ್ತಿದೆ.

ಈ ಎಲ್ಲದರ ನಡುವೆ ಡಿಜಿಪಿ ಪ್ರವೀಣ್​ ಸೂದ್​​ 545 ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಪೂರ್ಣಗೊಂಡ ಬಳಿಕವೇ 402 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಡಿಜಿಪಿ ಪ್ರವೀಣ್​ ಸೂದ್​,ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿದವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪಿಎಸ್​ಐ ಪಟ್ಟಿಯಿಂದ ಹೊರಗಿಟ್ಟಿದ್ದೇವೆ. ಈ ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕವೇ 402 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ರಾಜ್ಯ ಪೊಲೀಸ್​ ಇಲಾಖೆ ಕರೆದಿರುವ 402 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಹುದ್ದೆಗಳಲ್ಲಿ 26 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿಡಲಾಗಿದೆ. ಉಳಿದ 376 ಹುದ್ದೆಗಳಿಗೆ ಯಾರು ಬೇಕಿದ್ದರೂ ಅರ್ಜಿ ಸಲ್ಲಿಸಬಹುದು. ಕಲ್ಯಾಣ ಕರ್ನಾಟಕದವರಿಗೆ ಮಾತ್ರ 402 ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ. ಆದರೆ ಇದೀಗ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿರುವುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಇದನ್ನು ಓದಿ : Groom Arrest : ತಾಳಿ ಕಟ್ಟುವ ವೇಳೆಯಲ್ಲೇ ಅತ್ಯಾಚಾರ ಕೇಸ್‌ನಲ್ಲಿ ವರ ಅರೆಸ್ಟ್‌

ಇದನ್ನೂ ಓದಿ : Shimoga : ಹರ್ಷ ಕೊಲೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಕೊಲೆಗೆ ಸ್ಕೆಚ್​..!

bengaluru police have arrested sowmya in associate professor exam leak issue

Comments are closed.