Bengaluru rape and murder: 3.5 ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕೊಲೆ: ತಾಯಿಯ ಪ್ರಿಯಕರನಿಂದಲೇ ನೀಚ ಕೃತ್ಯ

ಬೆಂಗಳೂರು: (Bengaluru rape and murder) ಮೂರುವರೆ ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ, ಕೊಲೆಗೈದಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಸದ್ಯ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗಾರ್ಮೆಂಟ್‌ ಒಂದರಲ್ಲಿ ಮೃತ ಬಾಲಕಿಯ ತಾಯಿ ಕೆಲಸ ಮಾಡುತ್ತಿದ್ದು, ಗಂಡನ ಜೊತೆ ಜಗಳ ಮಾಡಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಅಲ್ಲದೇ 26 ವರ್ಷದ ವ್ಯಕ್ತಿಯ ಜೊತೆ ಮಗುವಿನ ತಾಯಿ ಅನೈತಿಕ ಸಂಬಂಧ ಹೊಂದಿದ್ದಳು. ಕಳೆದ ಒಂದು ವರ್ಷದಿಂದ ಮಗುವಿನ ತಾಯಿ ಆರೋಪಿಯ ಜೊತೆ ವಾಸವಿದ್ದರು. ಆರೋಪಿ ತೀವ್ರ ಮಧ್ಯ ವ್ಯಸನಿಯಾಗಿದ್ದು, ಗಾಂಜಾ ನಶೆಯಲ್ಲಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ರಾತ್ರಿಯ ವೇಳೆ ಗಾಂಜಾ ಸೇವಿಸಿ ನಶೆಯಲ್ಲಿದ್ದ ಆರೋಪಿ ಮೂರುವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ನಂತರ ಮಗುವನ್ನು ಹೊಡೆದು ಸಾಯಿಸಿದ್ದಾನೆ. ಮಗು ಮೃತಪಟ್ಟ ನಂತರ ಮಗುವಿನ ತಾಯಿ ಹಾಗೂ ಅರೋಪಿಯ ಮಧ್ಯೆ ಜಗಳ ಉಂಟಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಹಾಗೂ ವಿವಿಧ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : Rape by father: 13 ವರ್ಷದ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ: ದೂರು ದಾಖಲು

13 ವರ್ಷದ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ: ದೂರು ದಾಖಲು

ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾದ ಮೇಲೆ ಘಟನೆ ಬೆಳಕಿಗೆ ಬಂದಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಕಾಮುಕ ತಂದೆಯ ವಿರುದ್ದ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Dhanbad Fire Accident : ಬಹುಮಹಡಿ ಕಟ್ಟಡದಲ್ಲಿ ಅಗ್ನಿದುರಂತ : ಮಕ್ಕಳು ಸೇರಿ 14 ಮಂದಿ ಸಾವು

ಇದನ್ನೂ ಓದಿ : ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದಕ್ಕೆ ಬೈದ ತಾಯಿ: ಮನನೊಂದು ನೇಣಿಗೆ ಶರಣಾದ ಬಾಲಕ

Bengaluru rape and murder: Rape, murder of 3.5-year-old child: Despicable act by mother’s lover

Comments are closed.