Bihar Bomb blast: ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟ : 6 ಮಂದಿಗೆ ಗಾಯ, ಇಬ್ಬರು ಅರೆಸ್ಟ್‌

ನವದೆಹಲಿ: (Bihar Bomb blast) ಬಿಹಾರದ ಸಸಾರಾಮ್ ಪಟ್ಟಣದಲ್ಲಿ ಬಾಂಬ್ ಸ್ಫೋಟ ನಡೆದಿದ್ದು, ಸ್ಪೋಟದಲ್ಲಿ ಆರು ಮಂದಿ ಗಾಯಗೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗಾಯಗೊಂಡವರೆಲ್ಲರೂ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಇದು ಕೋಮು ಘಟನೆಯಾಗಿ ಕಾಣುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಸಸರಾಮ್‌ ನ ಗುಡಿಸಲಿನಲ್ಲಿ ಸ್ಫೋಟ ವರದಿಯಾಗಿದ್ದು, ಮೇಲ್ನೋಟಕ್ಕೆ ಇದು ಕೋಮು ಘಟನೆಯಾಗಿ ಕಾಣುತ್ತಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಫೋಟ ನಡೆದ ಪ್ರದೇಶದಿಂದ ಒಂದು ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಘಟನಾ ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ. ಇನ್ನೂ ಸ್ಫೋಟದ ವಿಚಾರವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಆರು ಮಂದಿಯನ್ನು ಬನಾರಸ್‌ ನ ಹಿಂದೂ ವಿಶ್ವವಿದ್ಯಾಲಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಹ್ತಾಸ್‌ನ ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ. ಸ್ಫೋಟವು ಗುಡಿಸಲಿನಲ್ಲಿ ವರದಿಯಾಗಿದ್ದು, ಪ್ರದೇಶದಿಂದ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಮೇಲ್ನೋಟಕ್ಕೆ ಇದು ಕೋಮು ಘಟನೆಯಾಗಿ ಕಾಣುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ರೋಹ್ತಾಸ್‌ನ ಖಾಸಗಿ ಆಸ್ತಿಯಲ್ಲಿ ಅಕ್ರಮ ಸ್ಫೋಟಕಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಜನರು ಗಾಯಗೊಂಡಿದ್ದಾರೆ ಎಂದು ಕಂಡುಬಂದಿದೆ. ಘಟನಾ ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ. ಇಬ್ಬರನ್ನು ಬಂಧಿಸಲಾಗಿದೆ ಎಂದು ರೋಹ್ತಾಸ್ ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಸಸಾರಾಮ್ ಡಿಎಂ ಧರ್ಮೇಂದ್ರ ಕುಮಾರ್ ಅವರು ಎಲ್ಲಾ ಕೋನಗಳನ್ನು ತನಿಖೆ ನಡೆಯುತ್ತಿದೆ ಎಂದು ಹೇಳಿದರು. “ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಬಿಎಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಇದೀಗ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಕುಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಗೆ ವರದಿ ಮಾಡಿದೆ.

ಇದನ್ನೂ ಓದಿ : ಉಡುಪಿ : ಪಾಳು ಬಿದ್ದ ಕನಕ ಮಹಲ್ ಕಟ್ಟಡದಲ್ಲಿ ಮೃತದೇಹ ಪತ್ತೆ

ಇನ್ನೂ ರಾಜ್ಯದ ಕೆಲವು ಭಾಗಗಳಲ್ಲಿ ರಾಮನವಮಿ ಆಚರಣೆಯ ನಂತರ ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಒಟ್ಟು 45 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಸಸಾರಂನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 18 ಮಂದಿ ಸೇರಿದ್ದಾರೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು. “ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಇಲ್ಲಿ ಸೆಕ್ಷನ್ 144 ವಿಧಿಸಲಾಗಿದೆ” ಎಂದು ಅವರು ಹೇಳಿದರು.

Bihar Bomb blast: Bomb blast in Sasaram: 6 injured, 2 arrested

Comments are closed.