BJP leader Swami Gowda : ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು

ಮೈಸೂರು : ಕಾರು ಪಲ್ಟಿಯಾದ ಪರಿಣಾಮವಾಗಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ (BJP leader Swami Gowda) ರಸ್ತೆ ಅಪಘಾತದಲ್ಲಿ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸದ್ಯ ಬಿಜೆಪಿ ಮುಖಂಡನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

ತಮಿಳುನಾಡಿನ ಊಟಿ ಸಮೀಪ ಕಾರ್‌ ಪಲ್ಟಿಯಾಗಿದ್ದು, ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಮೈಸೂರಿನ ಎಲ್‌.ಆರ್‌.ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿರುವ ಸ್ವಾಮಿಗೌಡ ಅವರು ನಿನ್ನೆ ಸಂಜೆ ಗೆಳಯರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ಕಾರ್‌ ಪಲ್ಟಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಮಿಳುನಾಡಿನ ಊಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ವಾಹನ ಚಾಲಕ ಆತ್ಮಹತ್ಯೆ

ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕೃಷ್ಣ (58 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರು ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಲಕೃಷ್ಣ ಹಲವು ವರ್ಷಗಳಿಂದಲೂ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನ ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯಲ್ಲಿರುವ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದರು. ಮನೆಯ ಮಹಡಿಗೆ ತೆರಳಿದ್ದ ಬಾಲಕೃಷ್ಣ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕೃಷ್ಣ ಅವರು ಈ ಹಿಂದೆ ಆರೋಗ್ಯ ಇಲಾಖೆಯ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಹಲವು ವರ್ಷಗಳಿಂದಲೂ ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಬಾಲಕೃಷ್ಣ ಅವರ ಪುತ್ರ ಕಾವೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ : Student commits suicide : 12 ನೇ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು, ವಾಮಾಚಾರದ ಶಂಕೆ

ಇನ್ನು ಉಡುಪಿಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೇಹಳ್ಳಿ ಗ್ರಾಮದ ಉದ್ದಲಗುಡ್ಡೆಯ ದುರ್ಗಾ ಎಂಬಲ್ಲಿ ನಡೆದಿದೆ. ಪೂಜಾ ಪಿ ಶೆಟ್ಟಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಹ;ವು ವರ್ಷಗಳಿಂದಲೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತನ್ನ ತಂದೆಯೊಂದಿಗೆ ವಾಸವಾಗಿದ್ದರು. ಮುಂಜಾನೆಯ ವೇಳೆಯಲ್ಲಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ತಂದೆ ಕರುಣಾಕರ ಹೆಗ್ಡೆ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BJP leader Swami Gowda: BJP leader dies in an accident

Comments are closed.