ಡೆಹ್ರಾಡೂನ್ : ಬಿಜೆಪಿ ಶಾಸಕರೋರ್ವರು ತನಗೆ ಕಳೆದೆರಡು ವರ್ಷಗಳಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದು, ತನ್ನ ಮಗಳ ಡಿಎನ್ ಎ ಮಾದರಿ ಹೊಂದಾಣಿಕೆಯಾಗುತ್ತದೆ ಎಂದು ಮಹಿಳೆಯೋರ್ವರು ಆರೋಪಿಸಿದ್ದಾರೆ.

ಉತ್ತರಾಖಂಡ್ ನ ಡೆಹ್ರಾಡೂನ್ ನಲ್ಲಿ ಇಂತಹ ಘಟನೆ ನಡೆದಿದ್ದು, ಮಹಿಳೆ ಬಿಜೆಪಿ ಶಾಸಕರ ವಿರುದ್ದ ಆರೋಪಗಳ ಸುರಿಮಳೆಯನ್ನೇ ಗೈದಿದ್ದಾಳೆ. ನನ್ನ ಜೊತೆಗೆ ಬಿಜೆಪಿ ಶಾಸಕರು ಕಳೆದೆರಡು ವರ್ಷಗಳಿಂದಲೂ ನಿರಂತರವಾಗಿ ಸಂಪರ್ಕವನ್ನು ಹೊಂದಿದ್ದಾರೆ.

ತನ್ನ ಮಗಳ ಡಿಎನ್ಎ ಮಾದರಿ ಪತಿಯ ಡಿಎನ್ಎಗೆ ಹೊಂದಾಣಿಕೆಯಾಗುತ್ತಿಲ್ಲ. ಹೀಗಾಗಿ ಬಿಜೆಪಿ ಶಾಸಕರ ಜೊತೆಗೆ ಹೊಂದಾಣಿಕೆ ಯಾಗಬೇಕು ಎಂದು ಮಹಿಳೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಮಾತ್ರವಲ್ಲ ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

ಶಾಸಕರ ವಿರುದ್ದ ಮಹಿಳೆ ಲೈಂಗಿಕ ಕಿರಕುಳದ ಆರೋಪ ಮಾಡುತ್ತಿದ್ದಂತೆಯೇ ಶಾಸಕರ ಪತ್ನಿ ಡೆಹ್ರಾಡೂನ್ ನ ನೆಹರೂ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಿದ್ದು. ಮಹಿಳೆ ಸೇರಿದಂತೆ ನಾಲ್ಕು ಮಂದಿಯ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಮಹಿಳೆಯ ಲೈಂಗಿಕ ಕಿರುಕುಳ ಆರೋಪ ಬಿಜೆಪಿ ಶಾಸಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಶಾಸಕರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹೇಳುತ್ತಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.