ಕುಂದಾಪುರ : ನಾಡದೋಣಿ ಮುಳುಗಡೆ, ಮೂವರು ಮೀನುಗಾರರು ನಾಪತ್ತೆ

ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆಯಾಗಿ ಮೂವರು ಮೀನುಗಾರರು ನಾಪತ್ತೆ (Gangolli three fishermen Missing) ಆಗಿರುವ ಘಟನೆ ಗಂಗೊಳ್ಳಿ ಕಡಲ ತೀರದಲ್ಲಿ ನಡೆದಿದೆ. ಓರ್ವ ಮೀನುಗಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ನಾಪತ್ತೆಯಾದವರನ್ನು ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ರೋಹಿತ್ ಖಾರ್ವಿ ಎಂದು ಗುರುತಿಸಲಾಗಿದ್ದು, ಸಂತೋಷ್ ಖಾರ್ವಿಯನ್ನು ಸಮೀಪದಲ್ಲಿದ್ದ ಮತ್ತೊಂದು ದೋಣಿಯವರು ರಕ್ಷಣೆ ಮಾಡಿದ್ದಾರೆ.
ಮಂಗಳವಾರ ಬೆಳಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸೀವಾಕ್ ಪ್ರದೇಶದ ಬಳಿ ಈ ದುರಂತ ಸಂಭವಿಸಿದೆ. ದುರ್ಗಾ ಹೆಸರಿನ ನಾಡದೋಣಿಯಲ್ಲಿ ನಾಲ್ವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.
Also Read : ಮೂಡಬಿದಿರೆ : ಕಾಲೇಜು ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರಿಂದ ಅತ್ಯಾಚಾರ, ಮೂವರು ಅರೆಸ್ಟ್
ಭಾರೀ ಮಳೆ, ಗಾಳಿಯಿಂದಾಗಿ ಸಮುದ್ರ ಪ್ರಕ್ಷುಬ್ದವಾಗಿದ್ದು, ಬಾರೀ ಅಲೆಗಳಿಂದಾಗಿ ದೋಣಿ ಮಗುಚಿದೆ. ಕರಾವಳಿ ಪೊಲೀಸ್ ಮತ್ತು ಕರಾವಳಿ ಭದ್ರತಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾದ ಮೀನುಗಾರರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Gangolli three fishermen Missing : ಬಾರೀ ಮಳೆ : ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ ಇಂದಿನಿಂದ ಜುಲೈ 21ರ ವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿತ್ತು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ನದಿ ಪಾತ್ರ ಹಾಗೂ ಸಮುದ್ರ ತೀರದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿತ್ತು.
Also Read : ಕಾರ್ಕಳ ಪ್ರವಾಸೋದ್ಯಮಕ್ಕೆ ಹೊಡೆತ ಕೊಟ್ಟ ಕಾಂಗ್ರೆಸ್ ನಾಯಕರ ಆ ಒಂದು ಸುಳ್ಳು ..!
ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಅಪಾಯಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.



