Bomb explosion: ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ; ಮೂವರು ಸಾವು, ಇಬ್ಬರಿಗೆ ಗಾಯ

ಕೋಲ್ಕತ್ತಾ: Bomb explosion: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕ ರಾಜ್ ಕುಮಾರ್ ಮನ್ನಾ ಎಂಬುವವರ ಮನೆಯಲ್ಲಿ ನಿನ್ನೆ ತಡರಾತ್ರಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ರಾಜ್ ಕುಮಾರ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರದಲ್ಲಿ ಈ ಘಟನೆ ನಡೆದಿದೆ. ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜ್ ಕುಮಾರ್ ಅವರು ತೃಣಮೂಲ ಕಾಂಗ್ರೆಸ್ ಸ್ಥಳೀಯ ಅಧ್ಯಕ್ಷರೂ ಹಾಗೂ ಬೂತ್ ಅಧ್ಯಕ್ಷರೂ ಆಗಿದ್ದರು.

ಇದನ್ನೂ ಓದಿ: India tour of Banglaesh: ನಾಳೆ ಭಾರತ Vs ಬಾಂಗ್ಲಾ ಮೊದಲ ಏಕದಿನ: ಶಮಿ ಔಟ್, ಉಮ್ರಾನ್ ಇನ್; ಇಲ್ಲಿದೆ ಮ್ಯಾಚ್ ಡೀಟೇಲ್ಸ್

ಇನ್ನು ಬಾಂಬ್ ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಇಂದು ಇದೇ ಸ್ಥಳದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ಅದಕ್ಕೂ ಮುನ್ನ ಬಾಂಬ್ ಸ್ಫೋಟ ಪ್ರಕರಣ ನಡೆದಿದೆ. ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಆದರೆ ಪೊಲೀಸರು ಹಾಗೂ ಟಿಎಂಸಿ ನಾಯಕರು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

ಈ ಪ್ರಕರಣವನ್ನು ಎನ್ ಐಎ ತನಿಖೆ ನಡೆಸುವಂತೆ ಬಿಜೆಪಿ ಆಗ್ರಹಿಸಿದೆ. ಬಿಜೆಪಿ ಶಾಸಕ, ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿ, ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರದ ಭಾಗನ್ ಪುರ 2ನೇ ಬ್ಲಾಕ್ ನಲ್ಲಿರುವ ಟಿಎಂಸಿ ನಾಯಕನ ಮನೆಯಲ್ಲಿ ಸ್ಫೋಟವಾಗಿ ಮೂವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ಈ ಮನೆ ಟಿಎಂಸಿ ನಾಯಕ ರಾಜ್ ಕುಮಾರ್ ಮನ್ನಾರಿಗೆ ಸೇರಿದೆ. ಅವರು ಮನೆಯಲ್ಲೇ ಬಾಂಬ್ ತಯಾರಿಸುತ್ತಿದ್ದರು. ಈ ವೇಳೆ ಬಾಂಬ್ ಸ್ಫೋಟಗೊಂಡಿರಬಹುದು. ಎನ್ ಐಎ ಈ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: The Brick Kiln Collapsed : ಇಟ್ಟಿಗೆ ಭಟ್ಟಿ ಕುಸಿದು ಐವರ ಸಾವು, 7 ಮಂದಿಗೆ ಗಂಭೀರ ಗಾಯ

Bomb explosion: 3 people Died in Bomb Explosion At TMC Leader’s House In West Bengal BJP Demands NIA Probe

Comments are closed.