ಬ್ರಹ್ಮಾವರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅಗ್ನಿ ಅವಘದಲ್ಲಿ ಬ್ರಹ್ಮಾವರದ ಆಕಾಶವಾಣಿಯಲ್ಲಿರುವ ಸಪ್ತಮಿ ಹೋಟೆಲ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ರಾತ್ರಿ ಸುಮಾರು 9 ಗಂಟೆಯ ವೇಳೆಯಲ್ಲಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿ ಹೊತ್ತಿ ಉರಿಯುವುದಕ್ಕೆ ಆರಂಭವಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ್ಯಾ ಇಲ್ಲಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಲೇ ಸಂಭವಿಸಿದೆಯಾ ಅನ್ನೋ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.