Building collapse-3 dead: 4 ಅಂತಸ್ತಿನ ಕಟ್ಟಡ ಕುಸಿತ: 3 ಸಾವು, 12 ಮಂದಿಯ ರಕ್ಷಣೆ

ಲಕ್ನೋ: (Building collapse-3 dead) ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದು ಮಂಗಳವಾರ ಸಂಜೆ ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋದ ವಜೀರ್ ಹಸಂಗಂಜ್ ರಸ್ತೆಯಲ್ಲಿ ವಸತಿ ಕಟ್ಟಡ ಕುಸಿದಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ಮೂವರ ಮೃತದೇಹಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.” ಎಂದು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ನಡೆಸುತ್ತಿರುವ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ. ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿದ 12 ಜನರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪಾಠಕ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ತೆರಳಿ ಘಟನೆಗೆ ಸಿಲುಕಿದ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ಈ ವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಸಿತವಾದ ಕಟ್ಟಡದಲ್ಲಿ 8 ಕುಟುಂಬಗಳು ವಾಸಿಸುತ್ತಿದ್ದು, ಸುಮಾರು 30-35 ಜನರು ಕಟ್ಟಡ ಕುಸಿತದ ಅವಶೇಷದಡಿಯಲ್ಲಿ ಸಿಲುಕಿರುವುದಾಗಿ ಯುಪಿ ಡಿಜಿಪಿ ತಿಳಿಸಿದ್ದಾರೆ.

ಇದನ್ನೂ ಓದಿ : Honour killing : ನ್ಯಾಯಲಯದಲ್ಲಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

ಇದನ್ನೂ ಓದಿ : ಪತ್ನಿಯನ್ನು ಚಾಕುನಿಂದ ಇರಿದುಕೊಂದ ಪತಿರಾಯ : ಭೀಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಕಟ್ಟಡ ಕುಸಿತವಾದ ಹಿಂದಿನ ದಿನ ಉತ್ತರ ಭಾರತದಾದ್ಯಂತ ಭಾರಿ ಭೂಕಂಪನದ ವರದಿಯಾಗಿದೆ. ಇದೇ ಕಾರಣದಿಂದಾಗಿ ಕಟ್ಟಡ ಕುಸಿದಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಕಟ್ಟಡ ಕುಸಿತಕ್ಕೆ ನೈಜ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು,12 ಮಂದಿಯನ್ನು ಈ ವರೆಗೆ ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಸಾಧ್ಯತೆಗಳು ಹೆಚ್ಚಿವೆ

Building collapse-3 dead: 4 storied building collapse: 3 dead, 12 rescued.

Comments are closed.