ಶ್ರೀನಗರ : (Bus Accident)ಎರಡು ಬಸ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯ ಪಠಾಣ್ ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ . 13 ವರ್ಷದ ಬಾಲಕಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ .
ಬಸ್ ಚಾಲಕನು ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುವ ವೇಳೆಯಲ್ಲಿ ಈ ಅಪಘಾತ(Bus Accident) ಸಂಭವಿಸಿದೆ . ಚಾಲಕನ ಅತೀ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ . ಸಾಂಬಾ ಜಿಲ್ಲೆಯ ಪಠಾಣ್ ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಗಾಯಗೊಂಡ 17 ಮಂದಿಯಲ್ಲಿ 7 ಮಂದಿ ತೀವ್ರವಾಗಿ ಗಾಯಗೊಂಡಿದ್ದು , ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ. ಭರತ್ ಭೂಷಣ್ ತಿಳಿಸಿದ್ದಾರೆ .
ಇದನ್ನೂ ಓದಿ : Shiva Murthy Murugha Sharanaru : ಮುರುಘಾಶ್ರೀ ಕೋಣೆಯ ರಹಸ್ಯ ಬಯಲು : ಚಾರ್ಜ್ ಶೀಟ್ ನಲ್ಲೇನಿದೆ ?
ಇದನ್ನೂ ಓದಿ : Chandrasheskar death case : ಚಂದ್ರು ಸಾವಿನ ಮರುಸೃಷ್ಟಿ, ಸಮಗ್ರ ತನಿಖೆ ಸಿಎಂ ಬೊಮ್ಮಾಯಿ ಸೂಚನೆ
ಈ ಅಪಘಾತದ ಕುರಿತಂತೆ ” ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ . ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪ ಸೂಚಿಸುತ್ತೇನೆ . ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದ್ದೇನೆ ” ಎಂದು ಟ್ವೀಟ್ ಮಾಡುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ .
(Bus Accident) In a terrible accident between two buses, three people were killed and 17 others were injured. The incident took place on the Pathankot National Highway in Samba district of Jammu and Kashmir. Three people, including a 13-year-old girl, died on the spot and seven others were seriously injured.