Bus caught Fire: ಮಹಾರಾಷ್ಟ್ರದ ಥಾಣೆಯಲ್ಲಿ ಬಸ್‌ ಗೆ ಬೆಂಕಿ: 65 ಪ್ರಯಾಣಿಕರು ಪಾರು

ಥಾಣೆ: (Bus caught Fire) ಮಂಗಳವಾರ ಮಹಾರಾಷ್ಟ್ರದ ಥಾಣೆ ನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಥಾಣೆ ನಗರ ವ್ಯಾಪ್ತಿಯ ಉತಾಳೇಶ್ವರ ಬಳಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮಹಾರಾಷ್ಟ್ರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಕನಿಷ್ಠ 65 ಮಂದಿ ಪ್ರಯಾಣಿಕರನ್ನು ಹೊತ್ತು ಥಾಣೆಯಿಂದ ನೆರೆಯ ಭಿವಾಂಡಿ ಪಟ್ಟಣಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್‌ ನಲ್ಲಿ ಬೆಂಕಿ (Bus caught Fire) ಕಾಣಿಸಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪೂರ್ತಿಯಾಗಿ ಬಸ್‌ ಬೆಂಕಿಯಿಂದ ಅವೃತವಾಗಿದ್ದು, ಬಸ್‌ ಚಾಲಕನ ಸಮಯಪ್ರಜ್ಞೆಯಿಂದ 65 ಮಂದಿ ಪ್ರಯಾಣಿಕರ ಪ್ರಾಣ ಉಳಿಯಿತು.

ವಿಷಯ ತಿಳಿದ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಅರ್ಧ ಗಂಟೆಯಲ್ಲಿ ಬೆಂಕಿಯನ್ನು ನಂದಿಸುವ ಕಾರ್ಯ ನಡೆಸಿದ್ದಾರೆ. ಭಿವಂಡಿ ಡಿಪೋಗೆ ಸೇರಿದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ನಗರ ವ್ಯಾಪ್ತಿಯ ಉತಾಳೇಶ್ವರ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ಭಾಗಶಃ ಸುಟ್ಟುಹೋಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್‌ಡಿಎಂಸಿ) ಮುಖ್ಯಸ್ಥ ಅವಿನಾಶ್ ಸಾವಂತ್ ತಿಳಿಸಿದ್ದಾರೆ. ಸದ್ಯ ಚಾಲಕನ ಸಮಯಪ್ರಜ್ಞೆಯಿಂದ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ : Car collision: ಹರಿಯಾಣದಲ್ಲಿ ಮರಕ್ಕೆ ಕಾರು ಢಿಕ್ಕಿ: ಐವರು ಸಾವು, ಇಬ್ಬರು ಗಂಭೀರ

ಇದನ್ನೂ ಓದಿ : Eastern Peripheral Expressway : ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇನಲ್ಲಿ ಮಹಿಳೆ ಶವ ಪತ್ತೆ

ಇದನ್ನೂ ಓದಿ : Presidency Engineering College : ಪ್ರೆಸಿಡೆನ್ಸಿ ಇಂಜಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿನಿ ಕೊಲೆ : ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯಕರನಿಂದ ಚಾಕು ಇರಿತ

On Tuesday, a bus of the State Road Transport Corporation caught fire in Maharashtra’s Thane city, and the passengers traveling in the bus narrowly escaped danger.

Comments are closed.