Bus overturned: ಪುಲ್ವಾಮಾದಲ್ಲಿ ಬಸ್ ಪಲ್ಟಿ: 4 ಸಾವು, 28 ಮಂದಿಗೆ ಗಾಯ

ಪುಲ್ವಾಮಾ: (Bus overturned) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಪರಿಣಾಮ ನಾಲ್ವರು ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ರಸ್ತೆಯಲ್ಲಿ ಬಸ್‌ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಬಿಹಾರದ ನಿವಾಸಿಗಳಾದ ನಾಲ್ವರು ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 28 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 23 ಮಂದಿಯನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ: ತಂದೆ, ಮಗನಿಗೆ ಜೈಲು ಶಿಕ್ಷೆ

ಉತ್ತರ ಪ್ರದೇಶ: ಮಾವ ಹಾಗೂ ಪತಿ ಸೇರಿ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದು, ಅತ್ಯಾಚಾರವೆಸಗಿದ ಆರೋಪದ ಮೇಲೆ ತಂದೆ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚಂದಾಪುರ ನಿವಾಸಿ ಅಮರನಾಥ್ (60 ವರ್ಷ) ಮತ್ತು ಅವರ ಮಗ ಚಂದ್ರರಾಜ್ (35 ವರ್ಷ) ಎಂದು ಗುರುತಿಸಲಾಗಿದ್ದು, ಇಬ್ಬರಿಗೂ 14 ಮತ್ತು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ : Truck-Car accident: ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: 3 ಮಂದಿ ಸ್ಥಳದಲ್ಲೇ ಸಾವು

ಇದನ್ನೂ ಓದಿ : ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ದುರಂತ: 4 ಮಹಿಳೆಯರು ಸೇರಿದಂತೆ 6 ಮಂದಿ ಸಾವು

ಇದನ್ನೂ ಓದಿ : Cheetah helicopter crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ: ಪೈಲಟ್‌ಗಳು ನಾಪತ್ತೆ

ಘಟನೆಯ ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್, 30 ವರ್ಷದ ಮಹಿಳೆಯ ಮೇಲೆ ಆಕೆಯ ಪತಿ ಮತ್ತು ಮಾವ ದೈಹಿಕವಾಗಿ ಹಲ್ಲೆ ಮತ್ತು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಜಾಮೀನಿನ ಮೇಲೆ ಹೊರ ಬಂದಿದ್ದರು ಆದರೆ ನ್ಯಾಯಾಲಯದ ತೀರ್ಪಿನ ನಂತರ ಅವರನ್ನು ಬಂಧಿಸಲಾಯಿತು ಎಂದು ಶ್ರೀ ಕುಮಾರ್ ಹೇಳಿದರು.

Bus overturned: Bus overturned in Pulwama: 4 dead, 28 injured

Comments are closed.