Car accident-constable death: ಅಪರಿಚಿತ ವಾಹನಕ್ಕೆ ಕಾರು ಢಿಕ್ಕಿ: ಪೊಲೀಸ್ ಪೇದೆ ಸಾವು, 3 ಮಂದಿಗೆ ಗಾಯ

ಮಧ್ಯ ಪ್ರದೇಶ: (Car accident-constable death) ಇಂದು ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಕಾನ್‌ಸ್ಟೆಬಲ್ ಸುನಿಲ್ ಆದಿವಾಸಿ ಮೃತ ವ್ಯಕ್ತಿ.

ಇಂದು ಮುಂಜಾನೆ 4.30 ರ ಸುಮಾರಿಗೆ ಮಲವಾರ್ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚಾಲಕ ಮತ್ತು ಗ್ರಾಮಸ್ಥರು ಪ್ರಕರಣದ ತನಿಖೆಗಾಗಿ ಇಂದೋರ್ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಶಾಜಾಪುರ ಮತ್ತು ಮಕ್ಸಿ ನಡುವಿನ ಹೆದ್ದಾರಿಯಲ್ಲಿ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಕಾನ್‌ಸ್ಟೆಬಲ್ ಸುನಿಲ್ ಆದಿವಾಸಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಲವಾರ್ ಪೊಲೀಸ್ ಠಾಣೆಯ ಇನ್‌ಚಾರ್ಜ್ ಜ್ಞಾನ್ ಸಿಂಗ್ ಠಾಕೂರ್ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ ಮತ್ತು ಮೂರನೇ ವ್ಯಕ್ತಿ ಶಾಜಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಘಟನೆಯ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : Dead body found in toilet: ಮನೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿ: ಹೃದಯಾಘಾತದ ಶಂಕೆ

ಔಷಧಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ; ಸಂಚಾರ ಅಸ್ತವ್ಯಸ್ತ

ಹೊಸದಿಲ್ಲಿ: ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಇಟಾವಾ ಬಳಿ ಔಷಧಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಭಾನುವಾರ ಸಂಚಾರ ಅಸ್ತವ್ಯಸ್ತಗೊಂಡಿದೆ. ಟ್ರಕ್ ಅಸ್ಸಾಂನ ಗುವಾಹಟಿಯಿಂದ ರಾಜಸ್ಥಾನದ ಜೈಪುರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಅಸ್ಸಾಂನ ಗುವಾಹಟಿಯಿಂದ ರಾಜಸ್ಥಾನದ ಜೈಪುರಕ್ಕೆ ಔಷದಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಇಟಾವಾ ಬಳಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಔಷಧಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ; ಸಂಚಾರ ಅಸ್ತವ್ಯಸ್ತ

ಇದನ್ನೂ ಓದಿ : Truck accident-7 died: ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದ ಟ್ರಕ್:‌ 7 ಮಂದಿ ಸಾವು

Car accident-constable death: Car collided with an unknown vehicle: Police constable killed, 3 injured

Comments are closed.