Car Accident in sindagi: ಭೀಕರ ರಸ್ತೆ ಅಪಘಾತ: ಪೊಲೀಸ್‌ ಅಧಿಕಾರಿ-ಪತ್ನಿ ಸಾವು

ಕಲ್ಬುರ್ಗಿ: (Car Accident in sindagi) ರಸ್ತೆಯಲ್ಲಿ ನಿಂತಿದ್ದ ಕಂಟೈನರ್‌ ಗೆ ಮಾರುತಿ ಕಾರ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಆವರ ಪತ್ನಿ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್‌ ಬಳಿ ನಡೆದಿದೆ. ರವಿ ಉಕ್ಕುಂದ (43 ವರ್ಷ), ಪತ್ನಿ ಮಧು (40 ವರ್ಷ) ಎನ್ನುವವರೇ ಮೃತ ದುರ್ದೈವಿಗಳು.

ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್‌ ಬಳಿಯಲ್ಲಿ ನಿಂತಿದ್ದ ಕಂಟೈನರ್‌ ಗೆ ಕಾರು ಡಿಕ್ಕಿ (Car Accident in sindagi) ಹೊಡೆದ ಪರಿಣಾಮ ಸಿಪಿಐ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ವೇಗವಾಗಿ ಬಂದು ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಪಘಾತ ನಡೆದ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು, ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಹಾವನ್ನು ತಪ್ಪಿಸಲು ಹೋಗಿ ದುರಂತ

ಹೆದ್ದಾರಿಯಲ್ಲಿ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ಟ್ರಕ್‌ ಚಾಲಕನೋರ್ವ ತಕ್ಷಣಕ್ಕೆ ಬ್ರೇಕ್‌ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿರುವ ಘಟನೆ ಬೆಂಗಳೂರು- ಹೈದರಾಬಾದ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಕಂಟೈನರ್ ಟ್ರಕ್ ಬರುತ್ತಿತ್ತು. ಅಗಲಗುರ್ಕಿ ಗ್ರಾಮದ ಬಳಿ ಹೆದ್ದಾರಿಯ ನಡುರಸ್ತೆಯಲ್ಲಿ ಹಾವೊಂದು ರಸ್ತೆ ದಾಟುತ್ತಿತ್ತು. ಇದನ್ನು ಗಮನಿಸಿದ ಚಾಲಕ ಸಡನ್ ಆಗಿ ಟ್ರಕ್‌ ಬ್ರೇಕ್ ಹಾಕಿದ್ದಾನೆ. ಪರಿಣಾಮ ಹಿಂದೆ ಇದ್ದ ಕಂಟೈನರ್ ಟ್ರಕ್, ಟಾಟಾ ಏಸ್, ಕಾರು, ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಸೇರಿದಂತೆ ಐದು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಟಾಟಾ ಏಸ್ ಚಾಲಕನ ಸ್ಥಿತಿ ಗಂಭೀರವಾಗಿದೆ.

ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಮುಂದಿನ ಲಾರಿಗೆ ಡಿಕ್ಕಿ ಹೊಡೆದ ಕಾರಣ ಅದರಲ್ಲಿದ್ದ ಚಾಲಕನಿಗೆ ಸ್ಟೇರಿಂಗ್ ಹೊಟ್ಟೆ ತಗುಲಿ ರಕ್ಷಣೆಗೆ ಮೊರೆ ಇಟ್ಟಿದ್ದಾನೆ. ಪಕ್ಕದಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ರಕ್ಷಣೆಗೆ ಧಾವಿಸಿದ್ದು, ಗ್ಯಾಸ್ ವೆಲ್ಡರ್‌ನನ್ನು ಸ್ಥಳಕ್ಕೆ ಕರೆಸಿ ಟಿಪ್ಪರ್ ಡೋರ್ ಹಾಗೂ ಮುಂಭಾಗವನ್ನು ಕತ್ತರಿಸಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : Suicide bombing: ಪೊಲೀಸ್‌ ಠಾಣೆಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ: ಅಧಿಕಾರಿ ಸೇರಿದಂತೆ ಇಬ್ಬರು ಸಾವು

ಇದನ್ನೂ ಓದಿ : Human Sacrifice: ಉತ್ತರ ಪ್ರದೇಶದಲ್ಲಿ ರುಂಡವಿಲ್ಲದ ಮೃತದೇಹ ಪತ್ತೆ: ನರಬಲಿಗಾಗಿ ನಡೆಯಿತೇ 3 ವರ್ಷದ ಬಾಲಕನ ಭೀಕರ ಹತ್ಯೆ..?

(Car Accident in Sindagi) A Maruti car collided with a container standing on the road and a CPI of Sindagi taluk and his wife died. Ravi Ukkunda (43 years old) and his wife Madhu (40 years old) are the deceased.

Comments are closed.