Car-bike accident: ಬೈಕ್‌ಗೆ ಏಸ್‌ಯುವಿ ಕಾರು ಢಿಕ್ಕಿ: 4 ಮಂದಿ ಸಾವು, ಇಬ್ಬರಿಗೆ ಗಾಯ

ಮಧ್ಯಪ್ರದೇಶ: (Car-bike accident) ಎರಡು ಬೈಕ್‌ಗಳಿಗೆ ವೇಗವಾಗಿ ಬಂದ ಎಸ್‌ಯುವಿ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಮತ್ತು 7 ವರ್ಷದ ಬಾಲಕ ಕೂಡ ಸಾವನ್ನಪ್ಪಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಲೌಗನ್ಸರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಎಸ್‌ಯುವಿ ಕಾರು ಚಾಲಕ ಮೊದಲಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಜಗದೀಶ್ ಭಿಲ್ (27) ಮತ್ತು ರಂಜೀತ್ ಭಿಲಾಲ (30) ಢಿಕ್ಕಿ ಹೊಡೆದಿದ್ದು, ಇಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅಪಘಾತವಾದ ನಂತರ ಎಸ್‌ಯುವಿ ಚಾಲಕನು ಅಪಘಾತದ ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.

ಈ ವೇಳೆ ಮತ್ತೊಂದು ಬೈಕ್‌ ಗೆ ಕಾರು ಢಿಕ್ಕಿ ಹೊಡೆದಿದ್ದು, ಬೈಕ್‌ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಜಗಲಿಯಾ ಭಿಲ್ (55), ಇಡು ಭಿಲ್ (35), ಸೀತಾಬಾಯಿ ಭಿಲ್ (30) ಮತ್ತು ಕಿರಣ್ ಭಿಲ್ (7) ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿ ಚಾಲಕ ಎಸ್‌ಯುವಿ ಕಾರನ್ನು ಸ್ಥಳದಲ್ಲೇ ಬಿಟ್ಟು ಅಪಘಾತ ಸ್ಥಳದಿಂದ ಓಡಿಹೋಗಿದ್ದಾನೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಇದೀಗ ಅಪಘಾತದ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಅಪಘಾತವೆಸಗಿ ಸ್ಥಳದಿಂದ ಓಡಿಹೋಗಿರುವ ಕಾರು ಚಾಲಕನನ್ನು ಹಿಡಿಯಲು ಶೋಧ ನಡೆಸುತ್ತಿದ್ದು, ಶೋಧ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Prostitution-attack on hotel: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಯೋ ಹೋಟೆಲ್ ಮೇಲೆ ದಾಳಿ: 7 ಮಹಿಳೆಯರ ರಕ್ಷಣೆ

ಇದನ್ನೂ ಓದಿ : Attempt to suicide: ಹಿರಿಯ ವಿದ್ಯಾರ್ಥಿಗಳಿಂದ ಕಿರುಕುಳ: ಬೇಸತ್ತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಇದನ್ನೂ ಓದಿ : Praveen Nettaru murder case: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್‌ ಎನ್‌ಐಎ ವಶಕ್ಕೆ

Car-bike accident: SUV collides with bike: 4 dead, 2 injured

Comments are closed.