Car collision: ಹರಿಯಾಣದಲ್ಲಿ ಮರಕ್ಕೆ ಕಾರು ಢಿಕ್ಕಿ: ಐವರು ಸಾವು, ಇಬ್ಬರು ಗಂಭೀರ

ಹರಿಯಾಣ: (Car collision) ಮರಕ್ಕೆ ಕಾರು ಢಿಕ್ಕಿ ಹೊಡೆದು ಒಟ್ಟು ಐದು ಮಂದಿ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ಹರಿಯಾಣದ ಸಿರ್ಸಾ-ರಾನಿಯಾ ರಸ್ತೆಯ ಮೆಹ್ನೆಖೇರಾ ಗ್ರಾಮದ ಬಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ (Car collision) ಹೊಡೆದ ಪರಿಣಾಮ ಕಾರು ಎರಡು ಭಾಗವಾಗಿದ್ದು, ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಮೃತ ವ್ಯಕ್ತಿಗಳನ್ನು ಮೆಹ್ನೆಖೇರಾ ಗ್ರಾಮಗ ನಿವಾಸಿಗಳೆಂದು ಗುರುತಿಸಲಾಗಿದ್ದು, ಗ್ರಾಮದಿಂಧ ಸುಮಾರು ಐದು ಕಿ. ಮೀ. ದೂರದಲ್ಲಿರುವ ಖಾರಿಯಾ ಗ್ರಾಮದ ಧಾರ್ಮಿಕ ಸ್ಥಳಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡ ಹರಿಯಾಣ ಪೊಲೀಸರು, ” ಘಟನೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೂ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವಸ್ಥಾನದಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಸಬ್‌ ಇನ್ಸ್ಪೆಕ್ಟರ್‌ ಕಿಶೋರಿ ಲಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ : Eastern Peripheral Expressway : ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇನಲ್ಲಿ ಮಹಿಳೆ ಶವ ಪತ್ತೆ

ಇದನ್ನೂ ಓದಿ : Presidency Engineering College : ಪ್ರೆಸಿಡೆನ್ಸಿ ಇಂಜಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿನಿ ಕೊಲೆ : ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯಕರನಿಂದ ಚಾಕು ಇರಿತ

ಇದನ್ನೂ ಓದಿ : ಕಾರ್ಕಳದಲ್ಲಿ ಶಾಲಾ ಮಕ್ಕಳ ಪ್ರವಾಸ ಬಸ್‌ ಪಲ್ಟಿ : ಮೂವರು ಶಿಕ್ಷಕಿಯರು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಇದನ್ನೂ ಓದಿ : ಬೆಂಗಳೂರಿನಲ್ಲಿ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ : ಡೆತ್‌ನೋಟ್‌ನಲ್ಲಿ ಬಿಜೆಪಿ ಶಾಸಕರ ಹೆಸರು

As a result of which the driver lost control of the car and hit a tree, the car split into two parts and the five occupants of the car died on the spot.

Comments are closed.