ಚಿಕ್ಕಮಗಳೂರಿನಲ್ಲಿ ಘನಗೋರ ದುರಂತ: ಮೆರವಣಿಗೆಯ ಮೇಲೆಯೇ ಹರಿದ ಕಾರು; 7 ವರ್ಷದ ಬಾಲಕಿ ದುರ್ಮರಣ
ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರು ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆಯು ಚಿಕ್ಕಮಗಳೂರು ಜಿಲ್ಲೆ ಬಿಳೆಕಲ್ಲು ಗ್ರಾಮದಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮೃತ ಬಾಲಕಿಯಲ್ಲಿ 7 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ. ಈಕೆ ಬಿಳೆಕಲ್ಲು ಗ್ರಾಮದಲ್ಲಿರುವ ತನ್ನ ತಂಗಿ ಮನೆಗೆ ಹೋಗಿದ್ದಳು ಎನ್ನಲಾಗಿದೆ. ಇನ್ನು ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು 11 ವರ್ಷದ ನಿಶ್ಚಿತಾ, 11 ವರ್ಷದ ತೃಪ್ತಿ , 45 ವರ್ಷದ ತಿಮ್ಮರಾಜು, 22 ವರ್ಷದ ಉಷಾ, 18 ವರ್ಷದ ಸೃಷ್ಟಿ, 28 ವರ್ಷದ ನಾಗರಾಜು, 16 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಗಾಯಗೊಂಡ 9 ಮಂದಿಯಲ್ಲಿ 8 ಜನರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಉಡುಪಿ: ಲಂಡನ್ ಸುಂದರಿಯ ಹೆಸರಲ್ಲಿ ಭಾರಿ ವಂಚನೆ; ಕಾಸ್ಮೆಟಿಕ್ ಬಿಸಿನೆಸ್ ಆಸೆಗೆ ಬಿದ್ದ ಶೆಫ್ ಕಳೆದುಕೊಂಡಿದ್ದು ಲಕ್ಷ ಲಕ್ಷ ಹಣ
ಇನ್ನು ಕಾರು ಚಲಾಯಿಸುತ್ತಿದ್ದ ಸುಧಾಕರ್ ಎಂಬವರಿಗೂ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಗಾಯಗೊಂಡಿದ್ದ ಸುಧಾಕರ್ರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಆಂಬುಲೆನ್ಸ್ ಅಡ್ಡಗಟ್ಟಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ ಘಟನೆ ಕೂಡ ನಡೀತು. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



