ಕಾರು – ಟ್ರಕ್‌ ನಡುವೆ ಭೀಕರ ಅಪಘಾತ : 9 ವರ್ಷದ ಮಗು ಸೇರಿದಂತೆ 6 ಮಂದಿ ಸಾವು

ತಿರುಚ್ಚಿ : ತಮಿಳುನಾಡಿನ ತಿರುವಾಸಿ ಬಳಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿಯಾಗಿ ಭೀಕರ ಅಪಘಾತ (Car-Truck collision) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಒಂಬತ್ತು ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಈ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ತಿರುಚ್ಚಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. “ಮುಂಜಾನೆ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿ ತಿರುಚ್ಚಿ-ಸೇಲಂ ಎನ್‌ಎಚ್‌ನಲ್ಲಿ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು ಮತ್ತು ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಆದರೆ ಎಲ್ಲಾ ಗಾಯಾಳುಗಳನ್ನು ತಿರುಚ್ಚಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆಯೇ ಮೃತ ದೇಹಗಳನ್ನು ಶವಪರೀಕ್ಷೆಗಾಗಿ ರವಾನಿಸಲಾಗಿದೆ. ” ಎಂದು ತಿರುಚ್ಚಿಯ ಎಸ್ಪಿ ಸುಜಿತ್ ಕುಮಾರ್ ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ : ಭೀಕರ ಬಸ್ ಅಪಘಾತ 4 ಸಾವು, 28 ಮಂದಿಗೆ ಗಂಭೀರ ಗಾಯ

ಇದನ್ನೂ ಓದಿ : ಲೈಂಗಿಕ ಕಿರುಕುಳ ಸಂತ್ರಸ್ತೆಯ ವಿವರಕ್ಕಾಗಿ ರಾಹುಲ್ ಗಾಂಧಿ ಮನೆಗೆ ಧಾವಿಸಿದ ದೆಹಲಿ ಪೊಲೀಸ್‌

ಒಂಬತ್ತು ಜನರಿದ್ದ ಓಮ್ನಿ ವ್ಯಾನ್ ಎಡಪಾಡಿಯಿಂದ ದೇವಸ್ಥಾನದ ದರ್ಶನಕ್ಕಾಗಿ ಕುಂಭಕೋಣಂಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ವಾಹನವು ತಿರುವಾಸಿ ದಾಟುತ್ತಿದ್ದಾಗ, ಭಾನುವಾರ ನಸುಕಿನ 3.50 ರ ಸುಮಾರಿಗೆ ತಿರುಚ್ಚಿಯಿಂದ ಕರೂರ್‌ಗೆ ತೆರಳುತ್ತಿದ್ದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Bus overturned: ಪುಲ್ವಾಮಾದಲ್ಲಿ ಬಸ್ ಪಲ್ಟಿ: 4 ಸಾವು, 28 ಮಂದಿಗೆ ಗಾಯ

ಪುಲ್ವಾಮಾ: (Bus overturned) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಪರಿಣಾಮ ನಾಲ್ವರು ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ರಸ್ತೆಯಲ್ಲಿ ಬಸ್‌ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಬಿಹಾರದ ನಿವಾಸಿಗಳಾದ ನಾಲ್ವರು ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 28 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 23 ಮಂದಿಯನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Car-Truck collision: A terrible accident between a car and a truck: 6 people died, including a 9-year-old child

Comments are closed.