ಭಾನುವಾರ, ಏಪ್ರಿಲ್ 27, 2025
HomeCrimeStudent Gang Raped : ಹೋಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ :...

Student Gang Raped : ಹೋಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಅರೆಸ್ಟ್‌, ಮೂವರು ಎಸ್ಕೇಪ್ ‌

- Advertisement -

ಗುರುಗ್ರಾಮ : Student Gang Raped : ಹೋಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಐವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಗುರ್‌ಗಾವಂನ ಗುರುಗ್ರಾಮದಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ.

14 ವರ್ಷದ ಸಂತ್ರಸ್ತೆಯ ತಾಯಿಯ ದೂರಿನ ಪ್ರಕಾರ, ಆಕೆಯ ಮಗಳು 12.30 ರ ಸುಮಾರಿಗೆ ಮನೆಯಿಂದ ಹೊರಟು ಹೋಗಿದ್ದಾಳೆ. ಮನೆಯ ಪಕ್ಕದಲ್ಲಿರುವ ಉದ್ಯಾನವನಕ್ಕೆ ತೆರಳುವುದಾಗಿ ಹೇಳಿದ್ದ ಮಗಳು ತುಂಬಾ ಸಮಯವಾದ್ರೂ ಮನೆಗೆ ವಾಪಾಸ್‌ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದ್ರೂ ಮಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಒಂದಿಡೀ ದಿನ ಮಗಳಿಲ್ಲದೇ ಕಳೆದಿದ್ದರು. ಮರು ದಿನ ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಗಳು ಮನೆಗೆ ವಾಪಾಸ್‌ ಬಂದಿದ್ದಳು. ಈ ವೇಳೆಯಲ್ಲಿ ತಾಯಿ ಮಗಳನ್ನು ವಿಚಾರಣೆ ನಡೆಸಿದ್ದಾರೆ.

ತಾನು ಉದ್ಯಾನವನದಲ್ಲಿ ಇದ್ದ ವೇಳೆಯಲ್ಲಿ ಅಲ್ಲಿಗೆ ಬಂದ ಇಬ್ಬರು ಅಪ್ರಾಪ್ತ ಬಾಲಕರು ನನ್ನನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಟೆಲ್‌ಗೆ ತೆರಳಿದ್ದಾರೆ. ಅಲ್ಲಿದ್ದ ಮತ್ತೆ ಮೂವರು ಸೇರಿಕೊಂಡು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರವನ್ನು ಯಾರ ಬಳಿಯಲ್ಲಾದ್ರೂ ತಿಳಿಸಿದ್ರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಇದೀಗ ಆರೋಪಿಗಳ ವಿರುದ್ದ ಪೊಲೀಸರು ಐಪಿಸಿ ಸೆಕ್ಷನ್ 376-ಡಿ (ಗ್ಯಾಂಗ್ ರೇಪ್), 506 (ಕ್ರಿಮಿನಲ್ ಬೆದರಿಕೆ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ ಅಡಿಯಲ್ಲಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸಲಾಗುತ್ತಿದೆ ಎಂದು ಪಶ್ಚಿಮ ಡಿಸಿಪಿ ದೀಪಕ್ ಸಹರನ್ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.

ಭಾರತದಲ್ಲಿ 2021 ರಲ್ಲಿ 31,677 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪ್ರತಿ ದಿನ ಸರಾಸರಿ 86, ಆದರೆ ಪ್ರತಿ ಗಂಟೆಗೆ ಸರಿಸುಮಾರು 49 ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ‘ಕ್ರೈಮ್ ಇನ್ ಇಂಡಿಯಾ 2021’ ವರದಿಯ ಪ್ರಕಾರ, 2020 ರಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ 28,046, ಆದರೆ 2019 ರಲ್ಲಿ 32,033.

ಇದನ್ನೂ ಓದಿ : Maharashtra car Accident : ಪಂಡರಾಪುರಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಹರಿದ ಕಾರು : 7 ಸಾವು, ಹಲವರು ಗಂಭೀರ

ಇದನ್ನೂ ಓದಿ : Girl’s auction: ರಾಜಸ್ಥಾನದಲ್ಲಿ ಸಾಲ ತೀರಿಸದಿದ್ದರೆ ಹೆಣ್ಣುಮಕ್ಕಳ ಮೇಲೆ ನಡೆಯುತ್ತೆ ಇಂಥ ದೌರ್ಜನ್ಯ..!

Class 10 Student Gang Raped In Hotel Gurugram 2 Accused Arrest 3 escape

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular