Collision between vehicles: ಕಾರುಗಳ ನಡುವೆ ಡಿಕ್ಕಿ: 5 ಸಾವು, ಮೂವರು ಗಂಭೀರ ಗಾಯ

ಖೋಪೋಲಿ: (Collision between vehicles) ಕಾರೊಂದು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖೋಪೋಲಿ ಪ್ರದೇಶದ ಮುಂಬೈ ಪುಣೆ ಎಕ್ಸ್‌ ಪ್ರೆಸ್‌ ವೇ ನಲ್ಲಿ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಸರಿಸುಮಾರು 5:30ರ ಹೊತ್ತಿಗೆ ಈ ಘಟನೆ ನಡೆದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಂಸ್ಥೆಗಳು ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ.

ಮುಂಬೈ ಕಡೆಗೆ ಬರುತ್ತಿದ್ದ ಇರ್ಟಿಕಾ ಕಾರಿಗೆ ವಾಹನ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಮೃತರಾದ ಐವರು ಒಂದೇ ಕುಟುಂಬದವರಾಗಿದ್ದು, ಗಾಯಾಳುಗಳನ್ನು ಪನ್ವೇಲ್ ನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಗಳ ಪ್ರಕಾರ ಇರ್ಟಿಕಾ ಮಚ್ಚಿಂದ್ರ ಅಬೋರ್‌ ನಲ್ಲಿ ಪ್ರಯಾಣಿಕರು ಮುಂಬೈ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿ ಬಿದ್ದಿದ್ದು, ಪ್ರಯಾಣಿಕರು ಹೊರಬಿದ್ದಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದರ ಚಾಲಕ ಹೆದ್ದಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಹೆದ್ದಾರಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡ ಮೂವರನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಪೋಲಿ ಪ್ರದೇಶದಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಹೊಸ ಮುಂಬೈನ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : Sexual assault against minor: ಉಡುಪಿ : ಬಾಲಕಿಗೆ ಲೈಂಗಿಕ ದೌರ್ಜನ್ಯ, ಅಪರಾಧಿಗೆ 10 ವರ್ಷ ಜೈಲು, 20 ಸಾವಿರ ರೂ. ದಂಡ

ಇದನ್ನೂ ಓದಿ : Sexual harassment: 17 ವರ್ಷದ ಹುಡುಗಿಯ ಮೇಲೆ ತಂದೆ, ಚಿಕ್ಕಪ್ಪ ಹಾಗೂ ಅಜ್ಜನಿಂದಲೇ ಅತ್ಯಾಚಾರ

ಇದನ್ನೂ ಓದಿ : Mysterious death: ರಾತ್ರಿ ಮಲಗಿದವಳು ಬೆಳಿಗ್ಗೆ ನೋಡುವಾಗ ಸಜೀವ ದಹನವಾಗಿದ್ದಳು ; ಕಾರಣ ನಿಗೂಢ

ಅಪಘಾತಗಳನ್ನು ಕಡಿಮೆ ಮಾಡಲು ಮತ್ತು ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸುರಕ್ಷಿತ ಚಾಲನೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ಡಿಸೆಂಬರ್ 1 ರಂದು 24 ಗಂಟೆಗಳ ಕಾರ್ ತಪಾಸಣೆ ಡ್ರೈವ್ ಅನ್ನು ಪ್ರಾರಂಭಿಸುವುದಾಗಿ ಪ್ರಾದೇಶಿಕ ಸಾರಿಗೆ ಕಚೇರಿ (RTO) ತಿಳಿಸಿದೆ. ಕಳೆದ 10 ತಿಂಗಳಲ್ಲಿ ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಮೀರಿದ ಸುಮಾರು 7,000 ಕಾರುಗಳಿಗೆ ದಂಡ ವಿಧಿಸಲಾಗಿದೆ.

(Collision between vehicles) Five people were killed and three seriously injured as a result of a car colliding with another vehicle on Mumbai Pune Expressway in Khopoli area.

Comments are closed.