ಕುಂದಾಪುರ : ಕೊರೊನಾ ಸೋಂಕಿಗೆ ಭಯಪಟ್ಟು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ನಡೆದಿದೆ.
ಬೇಬಿ ಶೆಟ್ಟಿ (55 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಬೆಂಗಳೂರಿಲ್ಲಿ ನೆಲೆಸಿರುವ ಬೇಬಿ ಶೆಟ್ಟಿ ಅವರ ಅಣ್ಣ ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆಯಲ್ಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಇದರಿಂದಾಗಿ ಆತಂಕಕ್ಕೆ ಒಳಗಾಗಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗುತ್ತಿದೆ.

ಸೋಮವಾರದಿಂದಲೇ ಮಹಿಳೆ ನಾಪತ್ತೆಯಾಗಿದ್ದು, ಮನೆ ಮಂದಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ. ಕೊನೆಗೆ ಮನೆಯ ಸಮೀಪದ ತೋಟದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಕೊರೊನಾ ಸೋಂಕಿನ ಭಯದಿಂದಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.