ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಮಹಾಮಾರಿ ಕೊರೊನಾ ವಾರಿಯರ್ಸ್ ಗಳನ್ನೇ ಬಲಿ ಪಡೆಯುತ್ತಿದೆ. ಇದೀಗ ಕೊರೊನಾ ಸೋಂಕಿಗೆ ಹೆದರಿ ಕೆಎಸ್ಆರ್ ಪಿಯ 50 ವರ್ಷದ ಹೆಡ್ ಕಾನ್‍ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಹೆಡ್ ಕಾನ್ ಸ್ಪೇಬಲ್ ಗೆ ನಿನ್ನೆಯಷ್ಟೇ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಎಸ್‌ಆರ್‌ಪಿ ಕಾನ್‍ಸ್ಟೇಬಲ್ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜಧಾನಿಯಲ್ಲಿ ಕೊರೊನಾ ಮಹಾಮಾರಿ ಹೆಚ್ಚಿನ ಸಂಖ್ಯೆಯಲ್ಲಿ ಬಲಿ ಪಡೆಯುತ್ತಿದ್ದು, ನಿನ್ನೆಷ್ಟೇ 5 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.