ಜಮ್ಮು & ಕಾಶ್ಮೀರ : Crime News : ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಪೂಂಚ್‌ನ ಸಿಂಧರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ ಸುರನ್‌ಕೋಟೆ ಬೆಲ್ಟ್‌ನ ಸಿಂಧರಾ ಟಾಪ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇದು ಗುಂಡಿನ ಚಕಮಕಿಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಪುನರಾರಂಭವಾಗಿದ್ದು, ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ತಿಳಿಸಿದ್ದಾರೆ. ಸೋಮವಾರ ರಾತ್ರಿ 11.30 ರ ಸುಮಾರಿಗೆ ಭದ್ರತಾ ಪಡೆಗಳ ನಡುವೆ ಮೊದಲು ನಡೆದಿದ್ದು, ನಂತರ ಇತರ ರಾತ್ರಿ ಕಣ್ಗಾವಲು ಉಪಕರಣಗಳೊಂದಿಗೆ ಡ್ರೋನ್‌ಗಳನ್ನು ನಿಯೋಜಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ಇದನ್ನೂ ಓದಿ : Jain Muni murder case : ಜೈನಮುನಿ ಹತ್ಯೆ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜೈನ ಸಮುದಾಯ ಪ್ರತಿಭಟನೆ
ಇದನ್ನೂ ಓದಿ : ಉಡುಪಿ : ಕಳಪೆ ಗುಣಮಟ್ಟದ ಟೈಲ್ಸ್ ಪೂರೈಕೆ, ಅಂಗಡಿ, ಕಂಪೆನಿಗೆ 1 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ
ಮುಂಜಾನೆ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿಯೊಂದಿಗೆ ಮತ್ತೆ ಎನ್‌ಕೌಂಟರ್ ಪ್ರಾರಂಭವಾಯಿತು. ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜೆ & ಕೆ ಪೊಲೀಸ್ ಪಡೆಗಳು ಮತ್ತು ಇತರ ಪಡೆಗಳು ಕಾರ್ಯಾಚರಣೆಯ ಭಾಗವಾಗಿದ್ದವು. ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರು ಮತ್ತು ಅವರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
Crime News: Gunfight between security forces, terrorists: Army killed four