ಮಹಿಳೆಯರ ಮೇಲಿನ ದೌರ್ಜನ್ಯ ,ಅಪರಾಧಗಳ ಸಂಖ್ಯೆ ಶೇ.46ರಷ್ಟು ಹೆಚ್ಚಳ : ಮಹಿಳಾ ಆಯೋಗ

ನವದೆಹಲಿ : ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಸಕ್ತ ವರ್ಷದ ಎಂಟು ತಿಂಗಳ ಅವಧಿಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇ.46 ರಷ್ಟು ಏರಿಕೆಯಾಗಿದ್ದು, ಇವುಗಳಲ್ಲಿ ಅರ್ಧಕ್ಕೂ ಹೆಚ್ಚಿನ ಪ್ರಕರಣಗಳು ಉತ್ತರ ಪ್ರದೇಶ ರಾಜ್ಯದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ‘ಆಯೋಗವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದೆ. ಇದರಿಂದಾಗಿ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ದೂರುಗಳು ದಾಖಲಾಗುತ್ತಿವೆ’ ಎಂದು ಹೇಳಿದರು.

ಇದನ್ನೂ ಓದಿ: ಗಡಿ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ ಕೊಟ್ಟ ಸಿಎಂ ಬೊಮ್ಮಾಯಿ

ಈ ವರ್ಷದ ಜನವರಿಯಿಂದ ಆಗಸ್ಟ್‌ವರೆಗೆ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಗಳ ಕುರಿತು ರಾಷ್ಟ್ರೀಯ ಮಹಿಳಾ ಆಯೋಗ 19,953 ದೂರುಗಳನ್ನು ಸ್ವೀಕರಿಸಿದೆ. 2020ರಲ್ಲಿ ಇದೇ ಅವಧಿಯಲ್ಲಿ 13,618 ದೂರುಗಳು ದಾಖಲಾಗಿದ್ದವು. ಈ ವರ್ಷದ ಜುಲೈ ತಿಂಗಳಲ್ಲಿ ಆಯೋಗ 3,248 ದೂರುಗಳನ್ನು ಆಯೋಗ ಸ್ವೀಕರಿಸಿತ್ತು ಎಂದು ರೇಖಾ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಕಾರು – ಟ್ರಕ್‌ ಭೀಕರ ಅಪಘಾತ : ಸ್ಥಳದಲ್ಲಿಯೇ ಐದು ಮಂದಿ ದುರ್ಮರಣ

(The number of abuses and crimes against women increased by 46%.)

Comments are closed.