ಜೈಪುರ : ಯುವತಿಯೋರ್ವಳಿಗೆ ಡ್ರಗ್ಸ್ ನೀಡಿ ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಘಟನೆ ಜೈಪುರದ ಶ್ಯಾಮ್‌ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ.
19 ವರ್ಷದ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಸ್ಯಾನಿಟೇಶನ್ ಕೆಲಸ ಮಾಡಿಕೊಂಡಿದ್ದಳು. ಈ ವೇಳೆಯಲ್ಲಿ ಆರೋಪಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ನಂತರ ಯುವತಿ ಯನ್ನು ಶ್ಯಾಮ್‌ನಗರದ ರಿಂಗ್ ರೋಡ್ ರಸ್ತೆಗೆ ಕರೆದೊಯ್ದಿದ್ದಾನೆ. ಈ ವೇಳೆಯಲ್ಲಿ ಇನ್ನೂ ನಾಲ್ವರನ್ನು ಸ್ಥಳಕ್ಕೆ ಕರೆಯಿಸಿಕೊಂಡಿದ್ದಾನೆ.
ಐವರು ಯುವಕರು ಸೇರಿಕೊಂಡು ಯುವತಿಗೆ ಡ್ರಗ್ಸ್ ನೀಡಿದ್ದಾರೆ. ನಂತರ ಯುವತಿಯನ್ನು ಬಲವಂತವಾಗಿ ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಈ ಕುರಿತು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
ಇನ್ನೊಂದೆಡೆ ಘಟನೆಯ ಬೆನ್ನಲ್ಲೇ ಐವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.
ಇದನ್ನೂ ಓದಿ : ಬಾನಲ್ಲೇ ಮಧುಚಂದ್ರಕೆ, ಯುಗಪುರುಷ ಸಿನಿಮಾ ಶೈಲಿಯಲ್ಲಿ ಪತ್ನಿಯ ಕೊಲೆ ಯತ್ನ ! ಕೊನೆಗೆ ಚಾಕುವಿನಿಂದ ಇರಿದು ಕೊಲೆ
ಇದನ್ನೂ ಓದಿ : ಪೈನಾಪಲ್ ನಲ್ಲಿ ಸ್ಫೋಟಕ ತುಂಬಿ ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷದ ಬಳಿಕ ಆರೋಪಿ ಅರೆಸ್ಟ್
Drugs and mass rape of young girl in Shamnagar Jaipur