Current shock-boy died: ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್:‌ ಮತ್ತೋರ್ವ ಬಾಲಕ ಸಾವು

ಬೆಂಗಳೂರು: (Current shock-boy died) ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಕರೆಂಟ್‌ ಶಾಕ್‌ಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ಇಬ್ಬರು ಬಾಲಕರಲ್ಲಿ ಓರ್ವ ಬಾಲಕ ಮೊನ್ನೆಯಷ್ಟೇ ಕೊನೆಯುಸಿರೆಳೆದಿದ್ದ. ಮತ್ತೊಬ್ಬ ಬಾಲಕ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಚಂದ್ರು (13) ಮೃತಪಟ್ಟ ಬಾಲಕ.

ಈತನಿಗೂ ಶೇ.74 ರಷ್ಟು ದೇಹ ಸುಟ್ಟು (Current shock-boy died) ಗಾಯಗಳಾಗಿತ್ತು. ಕಳೆದ 7 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಬಾಲಕ ಮೃತಪಟ್ಟಿದ್ದಾನೆ. ಸದ್ಯ ಬಾಲಕನ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್‌ ಮಾಡಲಾಗಿದೆ. ಗುರುವಾರ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗುವುದು.

ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಚಂದ್ರು ಹಾಗೂ ಸುಪ್ರೀತ್ ಕರೆಂಟ್‌ ಶಾಕ್‌ಗೆ ಒಳಗಾಗಿದ್ದರು. ಮನೆ ಮಾಲೀಕರು ಮಹಡಿಯನ್ನು ಹತ್ತಬೇಡಿ ಎಂಬ ಎಚ್ಚರಿಕೆಯನ್ನು ನೀಡಿದ್ದರೂ ಕೂಡಾ ಮಕ್ಕಳು ಪಾರಿವಾಳದ ಆಸೆಗೆ ಮನೆ ಮೇಲೆ ಹತ್ತಿದ್ದರು. ಈ ವೇಳೆ ಮಕ್ಕಳು ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವೈರ್ ಅನ್ನು ಮುಟ್ಟಿದ್ದರು. ಈ ವೇಳೆ ಮಕ್ಕಳಿಗೆ ಕರೆಂಟ್ ಶಾಕ್ ತಗುಲಿತ್ತು.

ಇದನ್ನೂ ಓದಿ : Tiger Death: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಹುಲಿ ಶವ ಪತ್ತೆ; ಸಂರಕ್ಷಿತಾರಣ್ಯದಲ್ಲೇ ನಡೆದುಹೋಯ್ತು ದುರಂತ

ಇದನ್ನೂ ಓದಿ : Accident between 2 vehicles: ಟಾಟಾ ಏಸ್ – ಲಾರಿ ಢಿಕ್ಕಿ : 6 ಸಾವು, 5 ಮಂದಿಗೆ ಗಾಯ

ಇಬ್ಬರು ಬಾಲಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡಿದ್ದ ಸುಪ್ರೀತ್‌ ಕೆಲದಿನಗಳ ಹಿಂದಷ್ಟೇ ಕೊನೆಯುಸಿರೆಳೆದಿದ್ದ. ಇಂದು ಚಂದ್ರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಲಕರಿಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

(Current shock-boy died) One of the two boys who went to catch a pigeon sitting on a high tension line and got electrocuted and admitted to the hospital, had breathed his last just a moment ago. Another boy died today after the treatment failed. Chandru (13) is the boy who died.

Comments are closed.