ಬೆಂಗಳೂರು : (Cyber crime) ರಾಜ್ಯ ಸರಕಾರ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಜನರು ಎಚ್ಚರಿಕೆಯನ್ನು ವಹಿಸಬೇಕಾಗಿದೆ. ಅದ್ರಲ್ಲೂ ಸೈಬರ್ ಕಳ್ಳರು ನಿಮ್ಮ ದಾಖಲೆಗಳನ್ನು ಹ್ಯಾಕ್ ಮಾಡಲು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಈ ಕುರಿತು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆಯಿದೆ.
ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಲು ತಮ್ಮ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಕೆ ಹೆಸರಲ್ಲಿ ಸಾಕಷ್ಟು ಫೇಕ್ ಲಿಂಕ್‌ಗಳು ಎಲ್ಲೆಡೆ ಹರಿದಾಡುತ್ತಿದೆ. ಇಂತಹ ಲಿಂಕ್‌ಗಳನ್ನು ಕ್ಲಿಕ್ ಮಾಡುವ ಮೊದಲು ಎಚ್ಚರಿಕೆ ವಹಿಸಬೇಕು. ಒಂದೊಮ್ಮೆ ಇಂತಹ ಫೇಕ್ ಲಿಂಕ್‌ಗಳನ್ನು ಕ್ಲಿಕ್ ಮಾಡಿ ನಿಮ್ಮ ಬ್ಯಾಂಕ್ ಖಾತೆಯ ವಿವರವನ್ನು ನೀಡಿದ್ರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣಕ್ಕೆ ಸೈಬರ್ ಕಳ್ಳರು ಕನ್ನ ಹಾಕಲಿದ್ದಾರೆ.
ಇದನ್ನೂ ಓದಿ : Snake bites woman : ತಾಲೂಕು ಆಸ್ಪತ್ರೆ ವಾರ್ಡ್‌ನಲ್ಲಿ ಮಹಿಳೆಗೆ ಕಚ್ಚಿದ ವಿಷಕಾರಿ ಹಾವು
ಈಗಾಗಲೇ ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಪ್ರಕಟಣೆಯನ್ನು ಹೊರಡಿಸಿದೆ. ಅಲ್ಲದೇ ಗ್ಯಾರಂಟಿ ಯೋಜನೆಗಳಿಗೆ ಆನ್‌ಲೈನ್ ಜೊತೆಗೆ ಆಫ್‌ಲೈನ್‌ನಲ್ಲಿಯೂ ಅವಕಾಶವನ್ನು ಕಲ್ಪಿಸಿದೆ. ಹೀಗಾಗಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲೇ ಬೇಕಾದ ಅನಿವಾರ್ಯತೆಯಿದೆ. ಸರಕಾರ ಕೂಡ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದೆ.
Cyber crime: Beware of cyber thieves! Be careful before applying for a guarantee scheme