Former Minister D.B. Inamadar : ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ್‌ ವಿಧಿವಶ

ಬೆಳಗಾವಿ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಈ ನಡುವಲ್ಲೇ ಬೆಳಗಾವಿಯ ಹಿರಿಯ ಕಾಂಗ್ರೆಸ್ ‌ನಾಯಕ, ಮಾಜಿ ಸಚಿವ ಡಿ.ಬಿ.ಇನಾಮದಾರ್ (Former Minister D.B. Inamadar) ಅವರು ಇಂದು (ಏಪ್ರಿಲ್‌ 25 ) ಇಹಲೋಕವನ್ನು ತ್ಯಜಿಸಿದ್ದಾರೆ.

ಮಾಜಿ ಸಚಿವ ಡಿ.ಬಿ.ಇನಾಮದಾರ್ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡಿ.ಬಿ. ಇನಾಮದಾರ್ ಅವರು ತಡರಾತ್ರಿ ಮಣಿಪಾಲ್ ಆಸ್ಪತ್ರೆಯಲ್ಲಿ (D.B. Inamadar passes away) ವಿಧಿವಶರಾಗಿದ್ದಾರೆ. ಕಳೆದೆರಡು ತಿಂಗಳಿಂದ ಡಿ.ಬಿ. ಇನಾಮದಾರ್ ‌ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿ ಆಗಿದೆ. ಈದೀಗ ಇನಾಮದಾರ್ ನಿಧನದಿಂದ ರಾಜ್ಯ ವಿಧಾನಸಭೆ ಚುನಾವಣೆ ‌ಹೊತ್ತಲ್ಲೇ ಬೆಳಗಾವಿ ‌ಕಾಂಗ್ರೆಸ್‌ಗೆ ಆಘಾತವಾಗಿದೆ.

Former Minister D.B. Inamadar : ಡಿ.ಬಿ.ಇನಾಮದಾರ್ ರಾಜಕೀಯ ಜೀವನ :

ಡಿ.ಬಿ.ಇನಾಮದಾರ್ ಅವರು 1983ರಲ್ಲಿ ಜನತಾ ಪಕ್ಷದಿಂದ‌ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ‌ಮೊದಲ ಸಲ ಗೆಲುವು ಕಮಡಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿ ಇಂದಿನವರೆಗೂ ಇನಾಮದಾರ್ ಅವರು ಕಾಂಗ್ರೆಸ್‌ನಲ್ಲಿದ್ದರು. ಒಟ್ಟು 9 ಚುನಾವಣೆಗಳನ್ನು ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ : 15 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಿಸಿ 6 ತಿಂಗಳ ಕಾಲ ಅತ್ಯಾಚಾರ : ಆರೋಪಿಯ ಬಂಧನ

ಇದನ್ನೂ ಓದಿ : ವಿಷ ಅನಿಲ ಸೇವಿಸಿ ಒಂದೇ ಕುಟುಂಬದ ಮೂವರು ಸಾವು

1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. 2023 ರ ಚುನಾವಣೆಯಲ್ಲಿ ‌ಕಿತ್ತೂರು ಕಾಂಗ್ರೆಸ್ ‌ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಬಿ ಇನಾಮದಾರ್ ಅವರಿಗೆ ಅನಾರೋಗ್ಯ ಕಾರಣಕ್ಕೆ ಇನಾಮದಾರ್ ಬದಲು ಬಾಬಾಸಾಹೇಬ್ ‌ಪಾಟೀಲಗೆ ಕಾಂಗ್ರೆಸ್ ಟಿಕೆಟ್‌ ನೀಡಿದೆ.

ಇದನ್ನೂ ಓದಿ : ಪ್ರಧಾನಿ ಮೋದಿ ಕೇರಳ ಭೇಟಿ ವೇಳೆ ದಾಳಿಯ ಕುರಿತು ಎಚ್ಚರಿಕೆ ಪತ್ರ

D B Inamadar passes away : Senior Congress leader, former minister D.B. Inamadar died

Comments are closed.