Deadbody found in car: 3 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾರಿನಲ್ಲಿ ಪತ್ತೆ

ಉತ್ತರ ಪ್ರದೇಶ: (Deadbody found in car) ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯಲ್ಲಿ ಮೂರು ದಿನಗಳಿಂದ ಕಾಣೆಯಾಗಿದ್ದ 37 ವರ್ಷದ ವ್ಯಕ್ತಿಯೊಬ್ಬರು ಲಾಕ್ ಮಾಡಿದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ಹರಿಯಾಣದ ಸೋನಿಪತ್‌ ಜಿಲ್ಲೆಗೆ ಸೇರಿದವನಾಗಿದ್ದು, ಮೃತ ವ್ಯಕ್ತಿಯನ್ನು ಮೋಹನ್‌ ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಮೋಹನ್‌ ಮೂರು ದಿನಗಳಿಂದ ಕಾಣೆಯಾಗಿದ್ದರು. ಇವರು ಹರಿಯಾಣ ಮೂಲದವರಾಗಿದ್ದು, ಉತ್ತರ ಪ್ರದೇಶದ ಮುಜಾಫರ್‌ನಗರದ ಚಾಪರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾಕ್ ಮಾಡಿದ ಕಾರಿನಲ್ಲಿ ಆತನ ಶವ (Deadbody found in car) ಶುಕ್ರವಾರ ಪತ್ತೆಯಾಗಿದೆ. ಶವದ ಜೊತೆಯಲ್ಲಿ ಅವರ ಆಧಾರ್‌ ಕಾರ್ಡ್‌ ಕೂಡ ದೊರೆತಿದ್ದು, ಅದರ ಆಧಾರದ ಮೇಲೆ ಅವರನ್ನು ಗುರುತಿಸಲಾಯಿತು ಎಂದು ಸರ್ಕಲ್‌ ಆಫೀಸರ್‌ ಯತೇಂದ್ರ ಸಿಂಗ್‌ ನಗರ್‌ ಹೇಳಿದ್ದರು.

ಇದೀಗ ಮೃತದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಜಾಫರ್ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ನಲ್ಲಿ ಬರಲು ನಿರಾಕರಿಸಿದ ಮಹಿಳೆ: ಹೆಲ್ಮೆಟ್‌ ನಿಂದ ಥಳಿಸಿದ ವ್ಯಕ್ತಿ

ಹರಿಯಾಣ: ವ್ಯಕ್ತಿಯೊಬ್ಬ ತನ್ನ ಬೈಕ್‌ ನಲ್ಲಿ ತನ್ನೊಂದಿಗೆ ಬರಲು ನಿರಾಕರಿಸಿದ್ದಕ್ಕೆ ಮಹಿಳೆಗೆ ಹೆಲ್ಮೆಟ್‌ ನಿಂದ ಹೊಡೆದ ಘಟನೆ ಹರಿಯಾಣದಲ್ಲಿ ನಡೆದಿದೆ. ಇದರಿಂದಾಗಿ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿಡಿಯೋ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವ್ಯಕ್ತಿ ಆಕೆ ಬೈಕ್‌ ನಲ್ಲಿ ತನ್ನೊಂದಿಗೆ ಬರಲು ನಿರಾಕರಿಸಿದ್ದಕ್ಕೆ ಹೆಲ್ಮೆಟ್‌ ನಿಂದ ಹೊಡೆಯುತ್ತಿರುವುದನ್ನು ನೋಡಬಹುದು. ಪಕ್ಕದಲ್ಲಿದ್ದ ಆಟೋ ರಿಕ್ಷಾ ಚಾಲಕ ಇದನ್ನು ತಡೆಯಲು ಮಧ್ಯಪ್ರವೇಶಿಸಿದ್ದು, ಇನ್ನೂ ಕೆಲವರು ಮಹಿಳೆಯ ರಕ್ಷಣೆಗೆ ಧಾವಿಸಿದ್ದಾರೆ.

ಇದನ್ನೂ ಓದಿ : UP car accident: ಸೈಕಲ್‌ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಕಾರು: ಚಾಲಕ ಅರೆಸ್ಟ್‌

ಇದೀಗ ಪ್ರಕರಣದ ಕುರಿತು ಗುರುಗ್ರಾಮ್‌ ಪೊಲೀಸ್‌ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಸಿಪಿ ಮನೋಜ್‌.ಕೆ ತಿಳಿಸಿದ್ದಾರೆ.

A 37-year-old man who had been missing for three days was found dead inside a locked car.

Comments are closed.