ಶಿವಮೊಗ್ಗ : Deadly attack on Hindu youth : ರಾಜ್ಯದಲ್ಲಿ ಕೋಮುವಾದದ ಸಂಘರ್ಷಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು, ಇದೀಗ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವೀರ ಸಾವರ್ಕರ್ ಫೋಟೋ ವಿಚಾರವಾಗಿ ಶಿವಮೊಗ್ಗ ನಗರ ರಣಾರಂಗವಾಗಿ ಬದಲಾಗಿದ್ದು ಇಬ್ಬರು ಯುವಕರ ಮೇಲೆ ಚಾಕು ಇರಿತವಾದ ಪ್ರಕರಣ ನಿನ್ನೆ ಬೆಳಕಿಗೆ ಬಂದಿತ್ತು. ಈ ಎಲ್ಲದರ ನಡುವೆಯೇ ಇದೀಗ ಭದ್ರಾವತಿಯಲ್ಲಿ ಭಜರಂಗದಳಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ನಿನ್ನೆ ಶಿವಮೊಗ್ಗ ನಗರದಲ್ಲಿ ಹಿಂದೂ ಕಾರ್ಯಕರ್ತರು ವೀರ ಸಾವರ್ಕರ್ ಫ್ಲೆಕ್ಸ್ನ್ನು ಅಳವಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮುಸ್ಲಿಂ ಯುವಕರು ವೀರ ಸಾವರ್ಕರ್ ಜಾಗದಲ್ಲಿ ಟಿಪ್ಪು ಸುಲ್ತಾನನ ಫೋಟೋ ಇರಬೇಕೆಂದು ಆಗ್ರಹಿಸಿದ್ದರು. ಇದರಿಂದಾಗಿ ಶಿವಮೊಗ್ಗದಲ್ಲಿ ಉಂಟಾದ ಗಲಾಟೆಯು ಸೆಕ್ಷನ್ 144 ಜಾರಿ ಮಾಡುವಂತೆ ಮಾಡಿತ್ತು.
ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆಯೇ ಶಿವಮೊಗ್ಗ ನಗರದಲ್ಲಿಯೇ ಅಂಗಡಿಗಳನ್ನು ಹೊಂದಿದ್ದ ಪ್ರೇಮ್ ಸಿಂಗ್ ಹಾಗೂ ಪ್ರವೀಣ್ ಕುಮಾರ್ ಎಂಬವರು ತಮ್ಮ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಮನೆ ಕಡೆಗೆ ಮುಖ ಮಾಡುವವರಿದ್ದರು. ಆದರೆ ಅಷ್ಟರಲ್ಲಾಗಲೇ ಮುಸುಕುದಾರಿಗಳಾಗಿ ಬಂದ ದುಷ್ಕರ್ಮಿಗಳು ಪ್ರತ್ಯೇಕ ಸ್ಥಳಗಳಲ್ಲಿ ಪ್ರವೀಣ್ ಕುಮಾರ್ ಹಾಗೂ ಪ್ರೇಮ್ ಸಿಂಗ್ಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು. ಪ್ರೇಮ್ ಸಿಂಗ್ ಮೇಲೆ ಮಾರಣಾಂತಿಕ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಈ ಘಟನೆ ನಡೆದು ಇನ್ನು ಒಂದು ದಿನ ಪೂರ್ಣಗೊಳ್ಳುವ ಮುನ್ನವೇ ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಿದ್ದಾರೆ. ಭಜರಂಗದಳದ ಕಾರ್ಯಕರ್ತನಾಗಿರುವ 27 ವರ್ಷದ ಸುನೀಲ್ ಎಂಬಾತ ಇಂದು ಬೆಳಗ್ಗೆ ತನ್ನ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಮಾರಣಾಂತಿಕ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಸುನೀಲ್ನನ್ನು ಭದ್ರಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನು ಓದಿ : cleared all flexes in shivamogga : ಶಿವಮೊಗ್ಗ ಗಲಾಟೆ ಪ್ರಕರಣ : ನಗರಾದ್ಯಂತ ಎಲ್ಲಾ ಫ್ಲೆಕ್ಸ್ಗಳನ್ನು ತೆರವುಗೊಳಿಸಿದ ಪಾಲಿಕೆ
ಇದನ್ನೂ ಓದಿ : Savarkar controversy : ನಮ್ಮ ಮೆಟ್ರೋಗೂ ಕಾಲಿಟ್ಟ ಸಾರ್ವಕರ್ ವಿವಾದ : ಪೋಟೋ ಅಳವಡಿಕೆಗೆ ವಿರೋಧ
Deadly attack on Hindu youth in Bhadravati