Death due to crane collapse : ಕ್ರೇನ್ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ದೇವನಹಳ್ಳಿ : (Death due to crane collapse) ಕ್ರೇನ್ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ನೂರ್ ಪೀಜಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕ್ರೇನ್ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಗೇಟ್ ಬಳಿ ಕ್ರೇನ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ನೂರ್ ಪೀಜಾ (19 ವರ್ಷ) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ(Death due to crane collapse).

ವೈಟ್ ಫೀಲ್ಡ್ ಸಮೀಪದ ಕನ್ನಮಂಗಲ ನಿವಾಸಿ ನೂರ್ ಪೀಜಾ ಎನ್ನುವ ವಿದ್ಯಾರ್ಥಿನಿಗೆ ಕ್ರೇನ್ ಡಿಕ್ಕಿ ಹೊಡೆದು ಭೀಕರ ಅಪಘಾತ(Death due to crane collapse) ಸಂಭವಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ. ಬುಧವಾರ ಮಧ್ಯಾಹ್ನ ವಿದ್ಯಾರ್ಥಿ ನೂರ್ ಪೀಜಾ ನಡೆದುಕೊಂಡು ಹೋಗುತ್ತಿದ್ದಾಗ ಚಾಲಕ ಅಜಾಗರೂಕತೆಯಿಂದ ಕ್ರೇನ್ ಚಲಾಯಿಸಿ ಹಿಂದಿನಿಂದ ವಿದ್ಯಾರ್ಥಿ ನೂರ್ ಪೀಜಾಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ನೂರ್ ಗಂಭೀರವಾಗಿ ಗಾಯಗೊಂಡಿದ್ದು, ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ನೂರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಅದರಂತೆ ಎರಡು ದಿನ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನೂರ್ ಪೀಜಾ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ : A terrible accident : ಕಾರು – ಬಸ್ ನಡುವೆ ಭೀಕರ ಅಪಘಾತ  : 11‌ಮಂದಿ ದಾರುಣ ಸಾವು

ಕೊಲೆ ಆರೋಪಿಯ ಬಂಧನ

ಬಿಹಾರದಲ್ಲಿ ಕುಡಿತದ ಅಮಲಿನಲ್ಲಿ ಪರಿಚಯಸ್ಥನನ್ನು ಕೊಂದಿದ್ದ ಅಪ್ರಾಪ್ತನನ್ನು ಕೆಎಸ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. 21ರಂದು ಕೆ.ಎಸ್.ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿನಗರ ವೃತ್ತದಲ್ಲಿ ಮುಖೇಶ್ ಎಂಬ ಬಾಲಕನನ್ನು ಮರದ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿತ್ತು. ಕೊಲೆಯಾದ ಮುಖೇಶ್ ಹಾಗೂ ಆರೋಪಿಗಳಿಬ್ಬರೂ ಬಿಹಾರ ಮೂಲದವರು.

ಇದನ್ನೂ ಓದಿ : Physician negligence : ವೈದ್ಯರ ನಿರ್ಲಕ್ಷಕ್ಕೆ ಗರ್ಭಿಣಿ, ಅವಳಿ ಶಿಶು ಸಾವು ; ಸರಕಾರದಿಂದ ಮಾರ್ಗಸೂಚಿ ಪ್ರಕಟ

ಮುಕೇಶ್ ಆರೋಪಿಯನ್ನು ಹೆಂಚಿನ ಕೆಲಸಕ್ಕೆ ಕರೆತಂದಿದ್ದ. ಇಬ್ಬರೂ ಕೂಡ ಕಾಶಿನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಉಳಿದಿದ್ದರು. ಅ.21ರಂದು ಮದ್ಯ ಸೇವಿಸಿ ಇಬ್ಬರೂ ಜಗಳ ಮಾಡಿಕೊಂಡಿದ್ದರು. ಈ ವೇಳೆ ಆರೋಪಿಗಳು ದೊಣ್ಣೆಯಿಂದ ಮುಖೇಶ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಕೃತ್ಯದ ನಂತರ ಆರೋಪಿಗಳು ಪಾಟ್ನಾ ರೈಲು ಹತ್ತಿ ನಗರಕ್ಕೆ ಬಂದಿದ್ದರು. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪಾಟ್ನಾದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : Honnali Chandrashekar Death : ಹೊನ್ನಾಳಿ : ಚಂದ್ರಶೇಖರ್ ಸಾವು, ಕೊಲೆ ಪ್ರಕರಣ ದಾಖಲು

11ಕೆವಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ತುಂಡಾದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಂತೆ ಬೀದಿಯ ಕಾವೇರಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮಹೇಶ್ (47) ಮೃತ ವ್ಯಕ್ತಿ. ಕೂಲಿ ಕೆಲಸಕ್ಕೆಂದು ತಿಗಳ ಚೌಡದೇನಹಳ್ಳಿಯಿಂದ ದೊಮ್ಮಸಂದ್ರ ಕಡೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ತುಂಡಾಗಿ ಬಿದ್ದಿದ್ದ 11ಕೆವಿ ವಿದ್ಯುತ್ ತಂತಿ ತಗುಲಿ ಮಹೇಶ್ ಮೃತಪಟ್ಟಿದ್ದಾರೆ.

ಈ ತಂತಿಗಳ ಬಗ್ಗೆ ಈ ಹಿಂದೆ ಗ್ರಾಮಸ್ಥರು ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಜನರು ಆರೋಪಿಸಿದ್ದಾರೆ. ಘಟನೆ ಕುರಿತು ಬೆಸ್ಕಾಂ ಅಧಿಕಾರಿ ದಿನೇಶ್ ಗೆ ಮಾಹಿತಿ ನೀಡಿದರೂ ನಿರ್ಲಕ್ಷ್ಯ ತೋರಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Comments are closed.