ಸೋಮವಾರ, ಏಪ್ರಿಲ್ 28, 2025
HomeCrimeDehli Gang rape: 3 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳು ಅರೆಸ್ಟ್‌

Dehli Gang rape: 3 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳು ಅರೆಸ್ಟ್‌

- Advertisement -

ನವದೆಹಲಿ: (Dehli Gang rape) ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಫತೇಪುರ್ ಬೆರಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇದೀಗ ಘಟನೆಯ ಕುರಿತು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮನೆಯಲ್ಲಿ ಮಗಳು ಕಾಣದೇ ಇರುವುದನ್ನು ಕಂಡು ಪೋಷಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು. ಆಕೆಯನ್ನು ಹುಡುಕುತ್ತಿರುವ ಸಂದರ್ಭದಲ್ಲಿ ಅವರ ನೆರೆಯ ವ್ಯಕ್ತಿಯೊಬ್ಬರು ಅದೇ ಪ್ರದೇಶದ ಪಕ್ಕದ ಕಾಡಿನಲ್ಲಿ ಮಗುವನ್ನು ನೋಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಇನ್ನಿಬ್ಬರು ಕಾಡಿನ ಕಡೆಗೆ ಮಗುವನ್ನು ಕರೆದುಕೊಂಡು ಹೋಗುತ್ತಿರುವುದನ್ನು ಕೂಡ ನೆರೆಯ ವ್ಯಕ್ತಿ ಗಮನಿಸಿರುವುದಾಗಿ ತಿಳಿಸಿದ್ದಾರೆ.

ಅವರ ಮಾಹಿತಿಯ ಮೆರೆಗೆ ಕಾಡಿನಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಬಾಲಕಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಚಾರವೆಸಗಿರುವುದು ತಿಳಿದುಬಂದಿದೆ. ಬಾಲಕಿಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುತ್ತಿದ್ದು, ಬಾಲಕಿ ಅಳುತ್ತಿದ್ದಳು. ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

” ಬೆಳಿಗ್ಗೆ ತನ್ನ ಮಗಳು ನಾಪತ್ತೆಯಾಗಿದ್ದಳು ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಆಕೆ ತನ್ನ ಮಗಳನ್ನು ಹುಡುಕುತ್ತಿರುವಾಗ, ತನ್ನ ಮಗಳು ಕಾಡಿನ ಪ್ರದೇಶದ ಬಳಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ್ದನ್ನು ಆಕೆಯ ನೆರೆಹೊರೆಯವರು ಮಹಿಳೆಗೆ ತಿಳಿಸಿದ್ದಾರೆ. ಇಬ್ಬರು ವ್ಯಕ್ತಿಗಳು ಕಾಡಿನ ಪ್ರದೇಶದ ಕಡೆಗೆ ಒಂದೇ ದಿಕ್ಕಿನಲ್ಲಿ ಹೋಗುತ್ತಿರುವುದನ್ನು ನೆರೆಹೊರೆಯವರು ನೋಡಿದ್ದಾರೆ. ಅಲ್ಲದೇ ಈ ವೇಳೆ ಬಾಲಕಿ ಅಳುತ್ತಿದ್ದಳು.” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ತಿಳಿಸಿದರು.

ಬಳಿಕ ಮಹಿಳೆ ತನ್ನ ಪತಿಗೆ ಘಟನೆಯ ಬಗ್ಗೆ ಹೇಳಿದ್ದಾಳೆ. ಅವರು ಘಟನೆಯನ್ನು ಪೊಲೀಸ್ ಠಾಣೆಗೆ ವರದಿ ಮಾಡಿದ್ದು, ಬಾಲಕಿಯನ್ನು ಕಾಡಿನೊಳಗೆ ಕರೆದೊಯ್ದ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ದ ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : Mangalore Murder : ಹಾಡಹಗಲೇ ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಚೂರಿ ಇರಿದು ಬರ್ಬರ ಹತ್ಯೆ

ಇದನ್ನೂ ಓದಿ : Assault on parking Attendant: ಶುಲ್ಕ ಪಾವತಿಸುವಂತೆ ಕೇಳಿದ ಪಾರ್ಕಿಂಗ್ ಅಟೆಂಡೆಂಟ್ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

Dehli Gang rape: Gang rape of 3-year-old girl: Accused arrested

RELATED ARTICLES

Most Popular