Dehli bus accident: 3 ಬಸ್‌ಗಳ ನಡುವೆ ಢಿಕ್ಕಿ: ಶಾಲಾ ಮಕ್ಕಳಿಗೆ ಗಾಯ

ದೆಹಲಿ: (Dehli bus accident) ಇಂದಿರಾಗಾಂಧಿ ಕ್ರೀಡಾಂಗಣದ ಬಳಿ ಮೂರು ಬಸ್‌ಗಳು ಪರಸ್ಪರ ಢಿಕ್ಕಿ ಹೊಡೆದು ಕನಿಷ್ಠ ಐವರು ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಘಟನೆಯ ವಿಡಿಯೋ ವೈರಲ್‌ ಆಗಿದ್ದು, ವಿದ್ಯಾರ್ಥಿಗಳನ್ನು ಬಸ್‌ ಕಿಟಕಿಯಿಂದ ಸ್ಥಳಾಂತರಿಸುವುದನ್ನು ಕಾಣಬಹುದು.

ಇಂದಿರಾಗಾಂಧಿ ಕ್ರೀಡಾಂಗಣದ ಬಳಿ ಮೂರು ಬಸ್‌ಗಳು ಪರಸ್ಪರ ಢಿಕ್ಕಿ ಹೊಡೆದು ಕನಿಷ್ಠ ಐವರು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಬ್ರೇಕ್ ವೈಫಲ್ಯದಿಂದ ಬಸ್‌ ಒಂದು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ಘಟನೆಯಲ್ಲಿ ಐದು ವಿದ್ಯಾರ್ಥಿಗಳು ಗಾಯಗೊಂಡಿದ್ದು, ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಘಟನೆಯ ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂದು ತನಿಖೆ ನಡೆಸುತ್ತಿದ್ದಾರೆ.

ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿದ್ದಕ್ಕಾಗಿ ಅಪ್ರಾಪ್ತ ಬಾಲಕಿಯ ಮೇಲೆ ಗುಂಡಿನ ದಾಳಿ

ಅಮ್ರೋಹಾ: ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿದ್ದಕ್ಕಾಗಿ ಪ್ರೇಮಿಯೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗುಂಡು ಹಾರಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಪ್ರಸ್ತುತ ಮೀರತ್‌ನ ಖಾಸಗಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

10 ನೇ ತರಗತಿಯ ವಿದ್ಯಾರ್ಥಿನಿ ಸಲಾರ್‌ಪುರಕ್ಕೆ ಇ-ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಬಾಲಕಿಯ ಪ್ರೇಮಿಯೊಬ್ಬ ಆಕೆ ಬೇರೊಬ್ಬನೊಂದಿಗೆ ಮಾತನಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಮೀರತ್‌ನ ಖಾಸಗಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.

ಪೊಲೀಸರ ಪ್ರಕಾರ, ರೈಲ್ವೇ ಕ್ರಾಸಿಂಗ್ ಬಳಿ ಇ-ರಿಕ್ಷಾ ನಿಲ್ಲಿಸಿದಾಗ ಆರೋಪಿ ಪವನ್ ಕುಮಾರ್ (18) ಎಂದು ಗುರುತಿಸಲಾದ ಆರೋಪಿ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಕುಮಾರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Mother-in-law murdered by nephew: ಲಡಾಕ್‌ ಪ್ರವಾಸಕ್ಕೆ ಹಣ ನೀಡಲು ನಿರಾಕರಿಸಿದ ಅತ್ತೆ: ಸುತ್ತಿಗೆಯಿಂದ ಅತ್ತೆಯ ತಲೆಯನ್ನೇ ಒಡೆದ ಸೋದರಳಿಯ

ಪೊಲೀಸ್ ಅಧೀಕ್ಷಕ ಆದಿತ್ಯ ಲಾಂಘೆ, “ಬಾಲಕಿಯ ಮುಖದ ಮೇಲೆ ಬುಲೆಟ್ ಗಾಯಗಳಾಗಿವೆ. ಆಕೆಯನ್ನು ಗಜ್ರೌಲಾದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಆಕೆಯ ಪ್ರಾಥಮಿಕ ವೈದ್ಯಕೀಯ ನೆರವು ನೀಡಿದ ನಂತರ ಮೀರತ್‌ನಲ್ಲಿರುವ ಉನ್ನತ ಆರೋಗ್ಯ ಸೌಲಭ್ಯಕ್ಕೆ ಶಿಫಾರಸು ಮಾಡಿದರು. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.” ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Delhi bus accident: Collision between 3 buses: School children injured

Comments are closed.