Dehli road accident: ವಲಸೆ ಕಾರ್ಮಿಕರ ಮೇಲೆ ಟ್ರಕ್ ಪಲ್ಟಿ : 4 ವರ್ಷದ ಬಾಲಕ ಸೇರಿ 4 ಮಂದಿ ಸಾವು

ನವದೆಹಲಿ: (Dehli road accident) ವೇಗವಾಗಿ ಬಂದ ಟ್ರಕ್‌ ನಿಯಂತ್ರಣ ಕಳೆದುಕೊಂಡು ರಸ್ತೆ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಪಲ್ಟಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ದೆಹಲಿಯ ಆನಂದ್ ಪರ್ಬತ್ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

“ರೋಹ್ಟಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದ ಎಂಸಿಡಿ ಟ್ರಕ್ ಅನ್ನು ಪೊಲೀಸರು ಕಂಡುಕೊಂಡಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಚಾಲಕನ ಪತ್ತೆ ಇನ್ನೂ ಆಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುವನ್ನು ಕಿಲ್ಲು (40 ವರ್ಷ) ಎಂದು ಗುರುತಿಸಲಾಗಿದ್ದು, ಅವರನ್ನು ಸಮೀಪದ ಜೀವನ್ ಮಾಲಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೂ ಕಿಲ್ಲು ಅವರ ಪುತ್ರ ಅನುಜ್ (4 ವರ್ಷ), ರಮೇಶ್ (30 ವರ್ಷ) ಮತ್ತು ಸೋನಮ್ (25 ವರ್ಷ) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲರೂ ಮಧ್ಯಪ್ರದೇಶದ ಟಿಕಮ್‌ಗಢ್‌ನವರು ಎಂದು ಡಿಸಿಪಿ ಹೇಳಿದ್ದಾರೆ, ಅಪಘಾತ ಸಂಭವಿಸಿದಾಗ ಬಾಲಕ ಆ ಪ್ರದೇಶದಲ್ಲಿ ಆಟವಾಡುತ್ತಿದ್ದನು ಎನ್ನಲಾಗಿದೆ.

ಇನ್ನೊಂದು ಘಟನೆಯಲ್ಲಿ, ಮಧ್ಯಪ್ರದೇಶದ ರೇವಾ-ಸತ್ನಾ ಗಡಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಬಸ್‌ಗಳಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಪಿಟಿಐ ವರದಿಯ ಪ್ರಕಾರ, ರಾತ್ರಿ 9 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಮತ್ತು ಬಸ್‌ಗಳಲ್ಲಿದ್ದ ಜನರು ಸತ್ನಾ ನಗರದ ‘ಕೋಲ್ ಮಹಾಕುಂಭ’ದಿಂದ ಹಿಂತಿರುಗುತ್ತಿದ್ದರು.

ಟ್ರಕ್‌ನ ಟೈರ್‌ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಘಟನೆ ಹೃದಯವಿದ್ರಾವಕವಾಗಿದೆ. ಗಾಯಾಳುಗಳ ಚಿಕಿತ್ಸೆಗೆ ಉತ್ತಮ ವ್ಯವಸ್ಥೆ ಕಲ್ಪಿಸುವುದು ನಮ್ಮ ಮೊದಲ ಆದ್ಯತೆ. ಅಗತ್ಯವಿದ್ದರೆ, ಗಾಯಾಳುಗಳನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೇರೆಡೆ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತದೆ. ಈ ದುರದೃಷ್ಟಕರ ಅಪಘಾತದಲ್ಲಿ ಬದುಕುಳಿಯದ ಸಹಚರರ ಸಂಬಂಧಿಕರಿಗೆ ₹10 ಲಕ್ಷ ಪರಿಹಾರ ಮೊತ್ತವನ್ನು ನೀಡಲಾಗುವುದು.

ಇದನ್ನೂ ಓದಿ : Bengaluru Prostitution: ಸಿಲಿಕಾನ್‌ ಸಿಟಿಯಲ್ಲಿ ನಡೆಯುತ್ತಿದೆ ವೇಶ್ಯಾವಾಟಿಕೆ ದಂಧೆ: ಖೆಡ್ಡಾಗೆ ಬಿದ್ರೆ ಕಥೆ ಅಷ್ಟೇ!

ಇದನ್ನೂ ಓದಿ : Sathna truck accident: ಸ್ಟೇಷನರಿ ಬಸ್‌ಗಳಿಗೆ ಟ್ರಕ್ ಢಿಕ್ಕಿ: 6 ಮಂದಿ ಸಾವು, 50 ಮಂದಿಗೆ ಗಾಯ: 10 ಲಕ್ಷ ರೂ ಪರಿಹಾರ ಘೋಷಣೆ

Delhi road accident: Truck overturns on migrant workers: 4 people including a 4-year-old boy die

Comments are closed.