ಮಂಗಳೂರು : NIA Probe Praveen Nettaru murder case : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಸಚಿವಾಲಯವು ಲಿಖಿತ ಆದೇಶವನ್ನು ನೀಡಿದೆ. ಹೀಗಾಗಿ ಇನ್ಮೇಲೆ ಪ್ರವೀಣ್ ಕೊಲೆ ಪ್ರಕರಣದ ತನಿಖೆಯಲ್ಲಿ ಎನ್ಐಎ ಅಧಿಕೃತವಾಗಿ ಆರಂಭಿಸಲಿದೆ. ಪ್ರವೀಣ್ ಕುಟುಂಬಸ್ಥರು ಸೇರಿದಂತೆ ಆಪ್ತರು ಈ ಕೊಲೆ ಪ್ರಕರಣವನ್ನು ಎನ್ಐಎಗೆ ನೀಡಬೇಕು ಎಂದು ಆಗ್ರಹಿಸಿದ್ದರು. ಪ್ರವೀಣ್ ಕೊಲೆಗೂ ಕೇರಳಕ್ಕೂ ನಂಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿರುವ ಅಪರಾಧದ ಗಂಭೀರತೆ ಹಾಗೂ ಪ್ರಕರಣದಲ್ಲಿ ಅಂತರಾಜ್ಯ ಸಂಪರ್ಕ ಇರುವ ಬಗ್ಗೆ ಅನುಮಾನ ಇರುವುದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ 2008 ರ ಪ್ರಕಾರ ತನಿಖೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ವಿಪುಲ್ ಅಲೋಕ್ ಅಗಸ್ಟ್ ಮೂರರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಿಗೆ ಆದೇಶವನ್ನು ನೀಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಈ ಆದೇಶದ ಪ್ರತಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ, 2008ರ ಸೆಕ್ಷನ್ 8ರೊಂದಿಗೆ ಸೆಕ್ಷನ್ ಆರರ ಉಪ ವಿಭಾಗ(4)ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ನಡೆಸುವಂತೆ ಆದೇಶ ನೀಡಿದೆ ಎಂದು ಈ ಪತ್ರದಲ್ಲಿ ಬರೆಯಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ನಡೆದು ಹಲವು ದಿನಗಳೇ ಕಳೆದಿದ್ದರೂ ಸಹ ಈವರೆಗೆ ಘಟನೆಯ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಬೆಳ್ಳಾರೆ ಪೊಲೀಸರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಸಹಕಾರ ನೀಡಿದ್ದಾರೆಂಬ ಶಂಕೆಯ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಎನ್ಐಎ ಈಗಾಗಲೇ ಬೆಳ್ಳಾರೆಗೆ ಆಗಮಿಸಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮಾಹಿತಿಯನ್ನು ಸಂಗ್ರಹಿಸಿತ್ತು. ಆದರೆ ಅಧಿಕೃತವಾಗಿ ತನಿಖೆಯನ್ನು ಕೈಗೆತ್ತಿಕೊಂಡಿರಲಿಲ್ಲ. ಆದರೆ ಇದೀಗ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕೃತವಾಗಿ ಎಂಟ್ರಿ ಕೊಡಲಿದ್ದು ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿರುವ ಸಾಧ್ಯತೆಯಿದೆ .
ಇದನ್ನೂ ಓದಿ : siddaramotsava : ಸಿದ್ದರಾಮೋತ್ಸವಕ್ಕೆ ಬಂದಿದ್ದು ಸಿದ್ದರಾಮಯ್ಯ ಫ್ಯಾನ್ಸ್, ಕಾಂಗ್ರೆಸ್ ಸತ್ತು ಹೋಗಿದೆ : ರೇಣುಕಾಚಾರ್ಯ ವ್ಯಂಗ್ಯ
department of home affairs orders to nia probe praveen nettaru murder case