praveen nettaru murder case : ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಂತೆ ಎನ್​ಐಎಗೆ ಕೇಂದ್ರದ ಆದೇಶ

ಮಂಗಳೂರು : NIA Probe Praveen Nettaru murder case : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಸಚಿವಾಲಯವು ಲಿಖಿತ ಆದೇಶವನ್ನು ನೀಡಿದೆ. ಹೀಗಾಗಿ ಇನ್ಮೇಲೆ ಪ್ರವೀಣ್​ ಕೊಲೆ ಪ್ರಕರಣದ ತನಿಖೆಯಲ್ಲಿ ಎನ್​ಐಎ ಅಧಿಕೃತವಾಗಿ ಆರಂಭಿಸಲಿದೆ. ಪ್ರವೀಣ್​ ಕುಟುಂಬಸ್ಥರು ಸೇರಿದಂತೆ ಆಪ್ತರು ಈ ಕೊಲೆ ಪ್ರಕರಣವನ್ನು ಎನ್​ಐಎಗೆ ನೀಡಬೇಕು ಎಂದು ಆಗ್ರಹಿಸಿದ್ದರು. ಪ್ರವೀಣ್​ ಕೊಲೆಗೂ ಕೇರಳಕ್ಕೂ ನಂಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು.

ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದಲ್ಲಿರುವ ಅಪರಾಧದ ಗಂಭೀರತೆ ಹಾಗೂ ಪ್ರಕರಣದಲ್ಲಿ ಅಂತರಾಜ್ಯ ಸಂಪರ್ಕ ಇರುವ ಬಗ್ಗೆ ಅನುಮಾನ ಇರುವುದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ 2008 ರ ಪ್ರಕಾರ ತನಿಖೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ವಿಪುಲ್​ ಅಲೋಕ್​ ಅಗಸ್ಟ್​ ಮೂರರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಿಗೆ ಆದೇಶವನ್ನು ನೀಡಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ ಈ ಆದೇಶದ ಪ್ರತಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯದ ಪೊಲೀಸ್​ ಮಹಾನಿರ್ದೇಶಕರಿಗೆ ಕಳುಹಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ, 2008ರ ಸೆಕ್ಷನ್​ 8ರೊಂದಿಗೆ ಸೆಕ್ಷನ್​​ ಆರರ ಉಪ ವಿಭಾಗ(4)ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ನಡೆಸುವಂತೆ ಆದೇಶ ನೀಡಿದೆ ಎಂದು ಈ ಪತ್ರದಲ್ಲಿ ಬರೆಯಲಾಗಿದೆ.

ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ ನಡೆದು ಹಲವು ದಿನಗಳೇ ಕಳೆದಿದ್ದರೂ ಸಹ ಈವರೆಗೆ ಘಟನೆಯ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಬೆಳ್ಳಾರೆ ಪೊಲೀಸರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಸಹಕಾರ ನೀಡಿದ್ದಾರೆಂಬ ಶಂಕೆಯ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಎನ್​ಐಎ ಈಗಾಗಲೇ ಬೆಳ್ಳಾರೆಗೆ ಆಗಮಿಸಿ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ಮಾಹಿತಿಯನ್ನು ಸಂಗ್ರಹಿಸಿತ್ತು. ಆದರೆ ಅಧಿಕೃತವಾಗಿ ತನಿಖೆಯನ್ನು ಕೈಗೆತ್ತಿಕೊಂಡಿರಲಿಲ್ಲ. ಆದರೆ ಇದೀಗ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್​ಐಎ ಅಧಿಕೃತವಾಗಿ ಎಂಟ್ರಿ ಕೊಡಲಿದ್ದು ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿರುವ ಸಾಧ್ಯತೆಯಿದೆ .

ಇದನ್ನು ಓದಿ : namma clinics : ರಾಜ್ಯ ಸರ್ಕಾರದ ‘ನಮ್ಮ ಕ್ಲಿನಿಕ್’ ಲೋಗೋ ಡಿಸೈನ್​ ಮಾಡಲು ಜನತೆಗೆ ಅವಕಾಶ : ಆಯ್ಕೆಯಾದ ಲೋಗೋ ವಿನ್ಯಾಸಗಾರರಿಗೆ ಸಿಗಲಿದೆ ವಿಶೇಷ ಗೌರವ

ಇದನ್ನೂ ಓದಿ : siddaramotsava : ಸಿದ್ದರಾಮೋತ್ಸವಕ್ಕೆ ಬಂದಿದ್ದು ಸಿದ್ದರಾಮಯ್ಯ ಫ್ಯಾನ್ಸ್​, ಕಾಂಗ್ರೆಸ್​ ಸತ್ತು ಹೋಗಿದೆ : ರೇಣುಕಾಚಾರ್ಯ ವ್ಯಂಗ್ಯ

department of home affairs orders to nia probe praveen nettaru murder case

Comments are closed.