ಜೈಪುರ : ಇತ್ತೀಚಿನ ದಿನಗಳಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸಾವಿನ ಕುರಿತು ಸರಕಾರಗಳು ಸಾವಿನ ಕಾರಣವನ್ನು ಹುಡುಕುವ ಕಾರ್ಯವನ್ನು ಮಾಡುತ್ತಿಲ್ಲ. ಕೆಲವೊಮ್ಮೆ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ್ರೂ ಸರಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದರೆ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದ್ದ ಗರ್ಭಿಣಿ ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯೆಯೋರ್ವರು ಆತ್ಮಹತ್ಯೆ (Doctor Suicide) ಮಾಡಿಕೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಡಾ ಅರ್ಚನಾ ಶರ್ಮಾ ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯೆ. ಡಾ.ಅರ್ಚನಾ ಶರ್ಮಾ ಹಾಗೂ ಆಕೆಯ ಪತಿಯ ಮಾಲೀಕತ್ವದ ಆಸ್ಪತ್ರೆಯಲ್ಲಿ ಮಹಿಳೆ ಹೆರಿಗೆಗೆ ದಾಖಲಾಗಿದ್ದರು. ಆದರೆ ಹೆರಿಗೆಯ ವೇಳೆಯಲ್ಲಿ ಗರ್ಭಿಣಿ ಸಾವನ್ನಪ್ಪಿದ್ದಾರೆ. ಗರ್ಭಿಣಿಯ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಮಾತ್ರವಲ್ಲದೇ ಪೋಷಕರು ಡಾ. ಅರ್ಚನಾ ವಿರುದ್ಧ ಲಾಲ್ಸೋಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ತಪ್ಪಿತಸ್ಥ ವೈದ್ಯರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದರು.
ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಆಗುತ್ತಿದ್ದಂತೆಯೇ ಒತ್ತಡಕ್ಕೆ ಒಳಗಾಗಿದ್ದ ಡಾ. ಅರ್ಚನಾ ಆಸ್ಪತ್ರೆಯ ಮೇಲೆ ಇರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ (Doctor Suicide)ಮಾಡಿಕೊಂಡಿದ್ದಾರೆ ಎಂದು ಹೆಚ್ಚುವರಿ ಎಸ್ಪಿ (ದೌಸಾ) ಲಾಲ್ ಚಂದ್ ಕಯಾಲ್ ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಗರ್ಭಿಣಿ ಸಾವಿನ ಹಿನ್ನೆಲೆಯಲ್ಲಿಯೇ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ ಬೇರೆಯ ಕಾರಣಗಳೇನಾದ್ರೂ ಇದೆಯಾ ಅನ್ನೋ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಕರ್ನಾಟಕವನ್ನು ಹಲಾಲ್ ಮುಕ್ತ ಮಾಡಿ : ಜನರಿಗೆ ಪ್ರಮೋದ್ ಮುತಾಲಿಕ್ ಕರೆ
ಇದನ್ನೂ ಓದಿ : Namma Metro KSRTC : ಯುಗಾದಿಗೆ ಸಿಹಿ ಸುದ್ದಿ ಕೊಟ್ಟ ನಮ್ಮ ಮೆಟ್ರೋ, ಕೆಎಸ್‌ಆರ್‌ಟಿಸಿ
(Rajasthan Doctor Booked for Death of Pregnant Woman Commits Suicide)