Innova car Accident :ಇನ್ನೋವಾ ಕಾರು ಪಲ್ಟಿ : ಐದು ಮಂದಿ ಸಾವು

Innova car Accident : ದೊಡ್ಡಬಳ್ಳಾಪುರ (Doddaballapura) : ಇನ್ನೋವಾ ಕಾರು ಪಲ್ಟಿಯಾಗಿ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ನಡೆದಿದೆ. ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಬಳಿಯ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಇನ್ನೋವಾ ಕಾರು, ಲಾರಿ ಓವರ್‌ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಬಳಿಯ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು.

Also Read : ಮಹಿಳೆಯರೇ.. ! ಲಿಪ್ಸ್ಟಿಕ್‌ ಖರೀದಿಸುವ ಮುನ್ನ ಗಮನಿಸಿ ? ಈ ಸಂಖ್ಯೆಗಿದೆ ವಿಶೇಷ ಕಾರಣ

ಮೃತಪಟ್ಟವರನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ. ಎಂ. ಈಶ್ವರಪ್ಪ, ಪುರುಷೋತ್ತಮ (75), ಕಾಳಪ್ಪ (65), ನಾರಾಯಣಪ್ಪ (70) ಮತ್ತು ಕಾರು ಚಾಲಕ ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also read: ಬೆಂಗಳೂರು – ಮಂಗಳೂರು ನಡುವೆ 6 ಗಂಟೆ ಪ್ರಯಾಣ..! ವಂದೇ ಭಾರತ್‌ ರೈಲು ಸಂಚಾರ

ಮಳೆಯಿಂದಾಗಿ ರಸ್ತೆ ಜಾರುವಿಕೆ ಕೂಡ ಅಪಘಾತಕ್ಕೆ ಒಂದು ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನIಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Doddaballapura Innova car Accident 5 Passengers dead in Kannada news

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories