ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಟಿಯರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ದಂಧೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಎನ್ ಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡ್ರಗ್ಸ್ ಮಾಫಿಯಾಗೇನು ಕಮ್ಮಿ ಇಲ್ಲ. ಆದ್ರೀಗ ಡ್ರಗ್ಸ್ ಮಾಫಿಯಾ ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಡ್ರಗ್ಸ್ ಕಂಟಕವಾಗಿ ಪರಿಣಮಿಸಿದೆ. ಸಿಲಿಕಾನ್ ಸಿಟಿಯಲ್ಲಿ ಎನ್‌ಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಅನಿಕಾ ಬಂಧಿಸಿ ವಿಚಾರಣೆ ನಡೆಸಿದಾಗ ಮೊಹಮ್ಮದ್ ಅನೂಪ್ ಹಾಗು ರಾಜೇಶ್ ದಂಧೆಯಲ್ಲಿ ಪಾಲುದಾರರು ಎಂಬ ಮಾಹಿತಿ ಬಹಿರಂಗವಾಗಿದೆ.

ಸ್ಯಾಂಡಲ್‌ವುಡ್ ಖ್ಯಾತ ನಟ, ನಟಿಯರು, ಕಿರುತರೆ ಧಾರವಾಹಿ ನಟ, ನಟಿಯರು, ಸಂಗೀತ ನಿರ್ದೇಶಕರು ಸೇರಿದಂತೆ ಹಲವು ಗಣ್ಯರು ಕೂಡ ತಮ್ಮಿಂದ ಡ್ರಗ್ಸ್ ಖರೀದಿ ಮಾಡಿದಾರೆಂಬ ಸ್ಫೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ. ಮಾತ್ರವಲ್ಲ ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವಂತ ಡ್ರಗ್ಸ್, ಮಾತ್ರೆಗಳನ್ನ ವಶಕ್ಕೆ ಪಡೆದಿದ್ದಾರೆ.

ಇಡೀ ಪ್ರಕರಣಕ್ಕೆ ಪ್ರಮುಖ ಆರೋಪಿ ಅನಿಕಾ ಕಿಂಗ್‌ಪಿನ್ ಎಂದು ತಿಳಿದುಬಂದಿದ್ದು, ಮನೆಯಲ್ಲಿ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಸ್ತುಗಳನ್ನ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.

ಸದ್ಯ ಅನಿಕಾಳನ್ನ ವಿಚಾರಣೆಗೆ ಒಳಪಡಿಸಲಾಗಿದ್ದು, ಮತಷ್ಟು ಸ್ಪೋಟಕ ಸುದ್ದಿಗಳು ಹೊರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.