ಡ್ರಗ್ಸ್ ಸಾಗಾಟ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ

0

ಮಂಗಳೂರು : ಡ್ರಗ್ಸ್ ದಂಧೆಯ ಬೆನ್ನು ಬಿದ್ದಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೀಗ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಮೂಲದ ಕಿಶೋರ್ ಶೆಟ್ಟಿ ಬಾಲಿವುಡ್ ನ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದಾನೆ. ಮಾತ್ರವಲ್ಲ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿಸಿಬಿ ಪೊಲೀಸರು ನಟ ಕಿಶೋರ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಕಿಶೋರ್ ಶೆಟ್ಟಿಗೂ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧವಿದ್ಯಾ ಅನ್ನೋ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತರು ಮಾಹಿತಿಯನ್ನು ನೀಡುವ ಸಾಧ್ಯತೆಯಿದೆ.

Leave A Reply

Your email address will not be published.