Electric Shock : ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊರ್ವ ಸಾವು

ದೆಹಲಿ : ರಾಷ್ಟ್ರ ರಾಜಧಾನಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯಲ್ಲಿ (Electric Shock) ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊರ್ವ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ (ಜುಲೈ 2)ಬೆಳಗ್ಗೆ 9 ಗಂಟೆ ಸುಮಾರಿಗೆ ವಿದ್ಯುತ್‌ ಶಾಕ್‌ ತಗುಲಿದ ಕಾರಣ ವ್ಯಕ್ತಿಯನ್ನು ಕೂಡಲೇ ಹತ್ತಿರದ ಎಲ್‌ಎನ್‌ಜೆಪಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೊಠಡಿಗೆ ರವಾನಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟ ವ್ಯಕ್ತಿ ಬಿಹಾರದ ಸಮಸ್ತಿಪುರ್ ನಿವಾಸಿ ಸುಜೀತ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಎಲ್‌ಎನ್‌ಜೆಪಿ ಆಸ್ಪತ್ರೆಯ ಆವರಣದೊಳಗಿನ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅವರು ನೆಲಮಾಳಿಗೆಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಕ್ಕೆ ತುತ್ತಾಗಾಗಿದ್ದರು. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವ ಕಾರ್ಮಿಕನ ಸಹಾಯದಿಂದ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧ ಸ್ಥಳವನ್ನು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ಮತ್ತು ಅಪರಾಧ ತಂಡವು ಪರಿಶೀಲಿಸುತ್ತಿದೆ ಎಂದು ಅಧಿಕಾರಿ ಹೇಳಿದರು. ಮೃತದೇಹವನ್ನು ಸಂರಕ್ಷಿಸಲಾಗಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : New York : ಮನೆಯ ಮುಂದಿದ್ದ ಮರಗಳನ್ನು ಕಡಿದವನಿಗೆ 12 ಕೋಟಿ ದಂಡ ವಿಧಿಸಿದ ನ್ಯಾಯಾಲಯ

ಇದನ್ನೂ ಓದಿ : Manipur violence : ಮಣಿಪುರ ಹಿಂಸಾಚಾರ : ಇಂದು ಸಂಚಾರ ನಿರ್ಬಂಧ ಸಡಿಲಿಕೆ

ಜೂನ್ 25 ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ನಿರಂತರ ಮಳೆಯಿಂದಾಗಿ ನೀರಿನ ಪ್ರವಾಹದ ನಡುವೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದರು. ಮೂಲಗಳ ಪ್ರಕಾರ, ನೆಲಮಾಳಿಗೆಯಲ್ಲಿ ನೀರು ತುಂಬಿತ್ತು ಮತ್ತು ಅದರಲ್ಲಿ ವಿದ್ಯುತ್ ತಂತಿಗಳು ಮುಳುಗಿದ್ದರಿಂದ ಆಕೆ ಸಾವನ್ನಪ್ಪಿದ್ದಳು ಎನ್ನಲಾಗಿತ್ತು.

Electric Shock: One person died due to electric shock in a building under construction

Comments are closed.