Explosion in pharma factory: ಫಾರ್ಮಾ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ: 1 ಸಾವು, 3 ಮಂದಿಗೆ ಗಾಯ

ಆಂಧ್ರಪ್ರದೇಶ: (Explosion in pharma factory) ಅಚ್ಯುತಪುರಂ ವಿಶೇಷ ಆರ್ಥಿಕ ವಲಯದ (ಎಸ್‌ಇಝಡ್) ಜಿಎಫ್‌ಎಂಎಸ್ ಫಾರ್ಮಾ ಫ್ಯಾಕ್ಟರಿಯಲ್ಲಿ ಮಂಗಳವಾರ ಮುಂಜಾನೆ ಭಾರಿ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಹಾಗೂ ಮೂವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂನ ವಿಶೇಷ ಆರ್ಥಿಕ ವಲಯದ (ಎಸ್‌ಇಝಡ್) ಜಿಎಫ್‌ಎಂಎಸ್ ಫಾರ್ಮಾ ಫ್ಯಾಕ್ಟರಿಯಲ್ಲಿ ಮಂಗಳವಾರ ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಲ್ಲಿಯವರೆಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವುದಾಗಿ ಎಂದು ವರದಿಯಾಗಿದೆ. ಆದರೆ ಸ್ಫೋಟಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ರಕ್ಷಣಾ ಕಾರ್ಯಾಚರಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಘಟನೆಯಲ್ಲಿ ಸಾವನ್ನಪ್ಪಿರುವವರ ನಿಖರ ಸಂಖ್ಯೆಗಳು ಇನ್ನೂ ತಿಳಿದುಬಂದಿಲ್ಲ.

ಸ್ಫೋಟದಲ್ಲಿ ಮೂವರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಎಲಮಂಚಿಲಿ ಸರ್ಕಲ್ ಇನ್ಸ್‌ಪೆಕ್ಟರ್ ಗಫೂರ್ ಶೇಖ್ ಪ್ರಕಾರ, “ಇದುವರೆಗೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಗಾಯಗೊಂಡ ಇತರ ಮೂವರು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಅದೇ ಸ್ಫೋಟದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Woman shot dead: ನಡುರಸ್ತೆಯಲ್ಲೇ ಮಹಿಳೆಯ ಗುಂಡಿಕ್ಕಿ ಹತ್ಯೆ

ಇದನ್ನೂ ಓದಿ : Tractor Jack broken: ಟ್ರ್ಯಾಕ್ಟರ್‌ ಟೈರ್‌ ಬದಲಿಸುವ ವೇಳೆ ದುರಂತ: ಇಬ್ಬರು ಸ್ಥಳದಲ್ಲೇ ಸಾವು

ಇದನ್ನೂ ಓದಿ : 130 students are sick: ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ವಿಷ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥ

ಸದ್ಯ ಘಟನೆಯ ಕುರಿತು ಅನಕಾಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಜೊತೆಗೆ ಸ್ಫೊಟಕ್ಕೆ ನಿಖರ ಕಾರಣಗಳನ್ನು ಪತ್ತೆ ಹಚ್ಚಲಾಗುತ್ತಿದೆ.

Explosion in pharma factory: Massive explosion in pharma factory: 1 dead, 3 injured

Comments are closed.