ಮಂಗಳವಾರ, ಏಪ್ರಿಲ್ 29, 2025
HomeCrimeGH Nayak passed away : ಖ್ಯಾತ ವಿಮರ್ಶಕ ಜಿ.ಎಚ್‌ ನಾಯಕ ವಿಧಿವಶ

GH Nayak passed away : ಖ್ಯಾತ ವಿಮರ್ಶಕ ಜಿ.ಎಚ್‌ ನಾಯಕ ವಿಧಿವಶ

- Advertisement -

ಮೈಸೂರು : ಕನ್ನಡ ಸಾಹಿತ್ಯಲೋಕದ ಖ್ಯಾತ ವಿಮರ್ಶಕ ಜಿ.ಎಚ್‌.ನಾಯಕ (GH Nayak passed away) ತಮ್ಮ 88 ವರ್ಷ ವಯಸ್ಸಿನಲ್ಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಜಿ.ಎಚ್‌. ನಾಯಕ ಅವರು ಇಂದು (ಮೇ 26) ಶುಕ್ರವಾರದಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬ ಆಪ್ತರು ತಿಳಿಸಿದ್ದಾರೆ.

ಮೃತ ಜಿ.‌ ಎಚ್. ನಾಯಕ ಅವರು ಪತ್ನಿ ಮೀರಾ ನಾಯಕ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳು ಅಗಲಿದ್ದಾರೆ. ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅವರ ಪೂರ್ಣ ಹೆಸರು ಗೋವಿಂದರಾಯ ಹಮ್ಮಣ್ಣ ನಾಯಕ ಎನ್ನುವುದಾಗಿದೆ. ಸೆ. 18, 1935ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂ ಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಅವರು ಮೈಸೂರಿನಲ್ಲಿ ನೆಲೆಸಿದ್ದರು.

ಇದನ್ನೂ ಓದಿ : UPSC Result 2023 : ಒಂದೇ ಹೆಸರು, ರೋಲ್ ನಂಬರ್ ಕೂಡ ಒಂದೇ, ಇಬ್ಬರು ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸಿದ ಫಲಿತಾಂಶ

ಜಿ.‌ ಎಚ್. ನಾಯಕ ಅವರು ಉತ್ತರಾರ್ಧ ಕೃತಿಗೆ 2014ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ನಿಜದನಿ ವಿಮರ್ಶಾ ಕೃತಿಗೆ ವಿ.ಎಂ. ಇನಾಂದಾರ ಸ್ಮಾರಕ ಬಹುಮಾನ ಲಭಿಸಿದೆ. ಪಂಪ ಪ್ರಶಸ್ತಿ ಪುರಸ್ಕೃತರೂ ಆಗಿದ್ದರು. ವಯೋಸಹಜ ಕಾರಣಗಳಿಂದ ಅವರು ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರುವುದಿಲ್ಲ ಎನ್ನಲಾಗಿದೆ.

ದಕ್ಷಿಣಕನ್ನಡ : ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ದಕ್ಷಿಣಕನ್ನಡ : ಉದ್ಯಮಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದ್ಯಮಿ ಆತ್ಮಹತ್ಯೆ (Businessman committed suicide) ಸಂದರ್ಭದಲ್ಲಿ ಬಲೂನ್‌ನ್ನು ಕಟ್ಟಿಕೊಂಡು ನದಿಗೆ ಹಾರಿರುತ್ತಾರೆ.

ಸದ್ಯ ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಕುಮಾರಧಾರಾ ನದಿಗೆ ಬಲೂನ್‌ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಚಂದ್ರಶೇಖರ್‌ ಎಂದು ಗುರುತಿಸಲಾಗಿದೆ. ಉದ್ಯಮಿಯ ಮೃತ ದೇಹವನ್ನು ನದಿಯಿಂದ ಮೇಲೆ ತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ನೀಡಲಾಗಿದೆ ಎನ್ನಲಾಗಿದೆ.

ಉದ್ಯಮಿ ಚಂದ್ರಶೇಖರ್‌ ಅಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಸ್ಯ ಉದ್ಯಮಿ ಚಂದ್ರಶೇಖರ್‌ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಡಬ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Famous critic GH Nayak passed away

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular